ಹಿರಿಯ ವಿದ್ಯಾರ್ಥಿಗಳು ಕಾಲೇಜಿಗೆ ಹೊಸದಾಗಿ ಸೇರ್ಪಡೆಯಾಗುವ ವಿದ್ಯಾರ್ಥಿಗಳಿಗೆ ತಾವು ಕಲಿತ ಹಲವು ವಿಚಾರಗಳನ್ನು ತಿಳಿಸಿಕೊಡುವ ಮೂಲಕ ಮಾರ್ಗದರ್ಶಕರಾಗಬೇಕೆಂದು ಎಸ್.ಬಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಶಿವಲಿಂಗಯ್ಯ ಸಲಹೆ ನೀಡಿದರು.
ಮಂಡ್ಯ ನಗರದ ಎಸ್.ಬಿ ಸಮುದಾಯ ಭವನದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಎಸ್.ಬಿ ಎಜುಕೇಶನ್ ಟ್ರಸ್ಟ್ ನ ಮಾಂಡವ್ಯ ಪದವಿ ಪೂರ್ವ ಕಾಲೇಜು ವತಿಯಿಂದ ನಡೆದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಹಿರಿಯ ವಿದ್ಯಾರ್ಥಿಗಳಿಂದ ಕಿರಿಯ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಳೆಯ ಬೇರು ಹೊಸ ಚಿಗುರು ಕೂಡಿರಲು ಮರ ಸೊಬಗು ಎಂಬಂತೆ ಹಿರಿಯ, ಕಿರಿಯ ವಿದ್ಯಾರ್ಥಿಗಳು ಕೂಡಿ ಕಲಿದರೆ ಉತ್ತಮ ಶಿಕ್ಷಣವನ್ನು ಪಡೆಯಬಹುದು, ನಿಮಗೆ ಮಾರ್ಗದರ್ಶನ ಮಾಡಲು ಉಪನ್ಯಾಸಕರೆ ತಂಡವೇ ಇದೆ, ತಮಗೆ ಗೊತ್ತಿಲ್ಲ ವಿಷಯಗಳ ಬಗ್ಗೆ ಕೇಳಿ ತಿಳಿದುಕೊಂಡು ವ್ಯಾಸಂಗ ಮಾಡಬೇಕೆಂದರು.
ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರಾದ ಡಾ.ಮೀರಾ ಶಿವಲಿಂಗಯ್ಯ ಉದ್ಘಾಟಿಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಕೆ.ಕೆ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮಹದೇವಯ್ಯ, ಮಾಂಡವ್ಯ ಎಕ್ಸಲೆನ್ಸ್ ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸ್, ಶೈಕ್ಷಣಿಕ ಪಾಲುದಾರ ರಾಘವೇಂದ್ರ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಎಂ.ಎಸ್. ಅರ್ಚನಾ, ಅರ್ಪಿತ, ಉಮೇಶ್ ಹಾಗೂ ಪ್ರಶಾಂತ್ ಸೇರಿದಂತೆ ಇನ್ನಿತರದಿದ್ದರು.
ಇದೇ ಸಂದರ್ಭದಲ್ಲಿ ಅತಿ ಹೆಚ್ಚು ಅಂಕವನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ತದನಂತರ ಕಾಲೇಜಿನ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.




