ಪ್ರಸ್ತುತ ಸಂದರ್ಭ ಜನಸಾಮಾನ್ಯರು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದು ಆರೋಗ್ಯದ ಬಗ್ಗೆ ಹೆಚ್ವಿನ ಕಾಳಜಿ ವಹಿಸುತ್ತಿಲ್ಲ.ಇದನ್ನು ಸರ್ಕಾರ ಮನಗಂಡು ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಜಿಲ್ಲೆಯಲ್ಲಿ ಆರೋಗ್ಯ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಅಶ್ವತಿ ತಿಳಿಸಿದರು.
ಪಾಂಡವಪುರದಲ್ಲಿ ನಡೆಸಲಾಗುತ್ತಿರುವ ಅರೋಗ್ಯ ಮೇಳದಲ್ಲಿ ಇದುವರೆಗೂ 4500 ಕ್ಕೂ ಹೆಚ್ಚು ಜನರು ಭಾಗವಹಿಸಿ ಆರೋಗ್ಯ ತಪಾಸಣೆಗೆ ಒಳಗಾಗಿದ್ದಾರೆ.
ಆರೋಗ್ಯ ಮೇಳಕ್ಕೆ ಉತ್ತಮವಾಗಿ ಜನಸ್ಪಂದನೆ ಸಿಗುತ್ತಿದೆ. ಜನರ ಆರೋಗ್ಯ ಮೇಳದ ಪ್ರಯೋಜನ ಪಡೆದು ಉತ್ತಮ ಆರೋಗ್ಯ ಹೊಂದಬೇಕೆಂದರು.
ಜನರ ಆರೋಗ್ಯ ತಪಾಸಣೆಗೆ ಮಾಡಿಕೊಂಡಿರುವ ವ್ಯವಸ್ಥೆಗಳ ಬಗ್ಗೆ ತಾಲ್ಲೂಕು ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಆರೋಗ್ಯ ತಪಾಸಣೆ ಸಂದರ್ಭದಲ್ಲಿ ಜನರಿಗೆ ಉನ್ನತ ಮಟ್ಟದ ಚಿಕಿತ್ಸೆಯ ಅಗತ್ಯತೆ ಇದ್ದರೆ ಅವರಿಗೆ ಸರಿಯಾದ ಮಾರ್ಗದರ್ಶನ ನೀಡಿ. ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ ಎಂದು ಆರೋಗ್ಯಾಧಿಕಾರಿಗೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದಿವ್ಯ ಪ್ರಭು ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು