Friday, September 20, 2024

ಪ್ರಾಯೋಗಿಕ ಆವೃತ್ತಿ

ಕೋವಿಡ್ ರೂಪಾಂತರಿ ಬಗ್ಗೆ ಭಯ ಬೇಡ ಎಚ್ಚರಿಕೆ ಇರಲಿ: ಡಾ.ಕುಮಾರ

ಮಂಡ್ಯ ಜಿಲ್ಲೆಯಲ್ಲಿ ಒಂದು ಕೋವಿಡ್ ಪ್ರಕರಣ ವರದಿಯಾಗಿದ್ದು, ಸಾರ್ವಜನಿಕರು ಭಯ ಪಡೆದ ಸರ್ಕಾರ ದಿಂದ ನೀಡಲಾಗುವ ಮಾರ್ಗಸೂಚಿಗಳನ್ನು ಪಾಲಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿಯಂತೆ 60 ವರ್ಷ ಮೇಲ್ಪಟ್ಟವರು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಗರ್ಭೀಣಿ ಯರು ಹಾಗೂ ಮಕ್ಕಳಿಗೆ ಹಾಲುಣಿಸುವ ತಯಾಂದಿರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಿ ಹಾಗೂ ಹೆಚ್ಚು ಜನಸಂದಣಿ ಇರುವ ಪ್ರದೇಶದಲ್ಲಿ ಅನವಶ್ಯಕವಾಗಿ ಓಡಾಡುವುದು ಸೇರುವುದು ಬೇಡ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರತಿ ದಿನ 90 ಕೋವಿಡ್ ಪರೀಕ್ಷೆ ಆರೋಗ್ಯ ಇಲಾಖೆಯಿಂದ ಜಿಲ್ಲೆಯಲ್ಲಿ ಪ್ರತಿದಿನ 90 ಕೋವಿಡ್ ಪರೀಕ್ಷೆ ನಡೆಸಲು ಗುರಿ ನಿಗದಿಯಾಗಿದ್ದು, SARI (severe acute respiratory infection) ತೀವ್ರತರ ಉಸಿರಾಟದ ಸೋಂಕು ಪ್ರಕರಣಗಳನ್ನು ಪರೀಕ್ಷೆಗೆ ಒಳಪಡಿಸಿ ಎಂದರು.

ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಕೋವಿಡ್ ಪರೀಕ್ಷೆಗೆ ಬೇಕಿರುವ ಸಲಕರಣೆಗಳು, ಸೋಂಕು ಪತ್ತೆಯಾದ ನಂತರ ಚಿಕಿತ್ಸೆಗೆ ಬೇಕಿರುವ ಬೆಡ್ ವ್ಯವಸ್ಥೆ, ಔಷಧಿಗಳು, ಕಾನ್ಟೆಕ್ಟ್ ಟ್ರೆಸಿಂಗ್ ಗೆ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.

ತಾಲ್ಲೂಕು‌ ಮಟ್ಟದ ವೈದ್ಯಾಧಿಕಾರಿಗಳು ತಾಲ್ಲೂಕು ಮಟ್ಟದಲ್ಲಿ ಸಭೆ ನಡೆಸಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಹೊರ ರಾಜ್ಯ ಹಾಗೂ ಹೊರ ದೇಶಗಳಿಗೆ ಪ್ರಯಾಣ ನಡೆಸಿ ಹಿಂದುರಿಗಿದ ನಂತರ ಅವರಿಗೆ ಕೋವಿಡ್ ಲಕ್ಷಣಗಳಿದ್ದಲ್ಲಿ ಪರೀಕ್ಷೆಗೆ ಒಳಪಡಿಸಿ, ಸಾರ್ವಜನಿಕರು ಶೀತ, ಜ್ವರ, ಕೆಮ್ಮು ಲಕ್ಷಣಗಳು ಇದ್ದಲ್ಲಿ ಮಾಸ್ಕ್ ಧರಿಸಿ ಸಾರ್ವಜನಿಕ ಸ್ಥಳದಿಂದ ದೂರವಿರಿ ಎಂದು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್, ಆರೋಗ್ಯ ಇಲಾಖೆಯ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಕುಮಾರ್, ಡಾ.ಅನಿಲ್ ಕುಮಾರ್, ಡಾ.ಸೋಮಶೇಖರ್, ಮಿಮ್ಸ್ ಅಧೀಕ್ಷಕ‌ ಡಾ.ಶ್ರೀಧರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!