Monday, November 23, 2026

ಪ್ರಾಯೋಗಿಕ ಆವೃತ್ತಿ

ಜೋಷಿ ಮೇಲಿನ ಆರೋಪ ತನಿಖೆ | ಬಳ್ಳಾರಿ ಸಾಹಿತ್ಯ ‌ಸಮ್ಮೇಳನಕ್ಕೆ ತೊಡಕು – ಸಚಿವ ತಂಗಡಗಿ

ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ್ ಜೋಷಿ ಅವರ ಮೇಲಿನ ಆರೋಪಗಳ ಕುರಿತು ಸಹಕಾರ ಇಲಾಖೆಯಿಂದ ವಿಚಾರಣೆ ನಡೆದಿರುವುದು ಹಾಗೂ ಹೈಕೋರ್ಟ್ ನಲ್ಲಿ ಮೊಕದ್ದಮೆ ದಾಖಲಾಗಿರುವ ಹಿನ್ನೆಲೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತಾ ಕಾರ್ಯಗಳನ್ನು ಕೈಗೊಳ್ಳದಿರುವುದರಿಂದ ಕಸಾಪ ಅಧ್ಯಕ್ಷರು ಈ ಹಿಂದೆ ಘೋಷಣೆ ಮಾಡಿದಂತೆ 2025ರ ಡಿಸೆಂಬರ್ ಮಾಹೆಯಲ್ಲಿ ಸಮ್ಮೇಳನ ನಡೆಸಲು ಸಾಧ್ಯವಾಗಿರುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಸಚಿವ ಶಿವರಾಜ ಎಸ್. ತಂಗಡಗಿ ತಿಳಿಸಿದ್ದಾರೆ.

nudikarnataka.com

ಶಾಸಕ ಮಧು ಜಿ.ಮಾದೇಗೌಡರ ಪ್ರಶ್ನೆಗೆ ಬೆಳಗಾವಿ ಅಧಿವೇಶನದಲ್ಲಿ ಸಚಿವರು ನೀಡಿರುವ ಲಿಖಿತ ಉತ್ತರದಲ್ಲಿ ಈ ಮಾಹಿತಿ ಇದೆ.

ಬಳ್ಳಾರಿಯಲ್ಲಿ ನಡೆಸಲು ಉದ್ದೇಶಿಸಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2025-26ನೇ ಸಾಲಿನ ಕ್ರಿಯಾಯೋಜನೆಯಲ್ಲಿ ರೂ. 10 ಕೋಟಿ ಅನುದಾನವನ್ನು ಮೀಸಲಿರಿಸಲಾಗಿದೆ.

ಸಮ್ಮೇಳನ ಸಂಬಂಧ ವಿವಿಧ ಸಮಿತಿಗಳು ರಚನೆಯಾದ ನಂತರ ಸಮಿತಿಗಳು‌ ನೀಡುವ ಒಟ್ಟಾರೆ ಪ್ರಸ್ತಾವನೆ ಮತ್ತು ಅಂದಾಜು ವೆಚ್ಚಗಳನ್ನು ಗಮನಿಸಿ ಬಳ್ಳಾರಿ ಜಿಲ್ಲಾಡಳಿತವು ಸಲ್ಲಿಸುವ ಪ್ರಸ್ತಾವನೆಯನ್ನು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ವಿವರಿಸಿದ್ದಾರೆ.

ಕಸಾಪ ಅಧ್ಯಕ್ಷ ಮಹೇಶ್ ಜೋಷಿ ಅವರು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ, ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಹೆಸರನ್ನು 2025 ಜೂನ್ ಮಾಹೆಯಲ್ಲಿ ಘೋಷಣೆ ಮಾಡಿದ್ದನ್ನು ಸ್ಮರಿಸಬಹುದು.

ವಿಶ್ವ ಕನ್ನಡ ಸಮ್ಮೇಳನ – ಇಲ್ಲ

ಮೂರನೇ ವಿಶ್ವ ಕನ್ನಡ ಸಮ್ಮೇಳನ ನಡೆಸುವ ಪ್ರಸ್ತಾವನೆಯು ಸರ್ಕಾರದ ಮುಂದಿರುವುದಿಲ್ಲ ಎಂದು ಸಚಿವ ಶಿವರಾಜ ಎಸ್. ತಂಗಡಗಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ