Monday, November 23, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಬೇಲೂರು ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ

ಮಂಡ್ಯ ತಾಲೂಕಿನ ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಹಾಗೂ ಆರ್ ಎಪಿಸಿಎಂಎಸ್ ನಿರ್ದೇಶಕ ಬೇಲೂರು ಸೋಮಶೇಖರ್ ಅವರು ಮಂಡ್ಯ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.

ಬೇಲೂರು ಸೋಮಶೇಖರ್ ಅವರು ಮಾಜಿ ಸಂಸದ ಸುಮಲತಾ ಅಂಬರೀಷ್ ಅವರ ಆಪ್ತರಾಗಿದ್ದು, ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷರಾಗಿದ್ದಾರೆ.

ಕಾಂಗ್ರೆಸ್ ಸೇರ್ಪಡೆಗೊಂಡ ಬೇಲೂರು ಸೋಮಶೇಖರ್ ಅವರನ್ನು ಮನ್ ಮುಲ್ ನಿರ್ದೇಶಕ ಯು.ಸಿ.ಶಿವಪ್ಪ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಹೊಸಹಳ್ಳಿ ಶಿವಲಿಂಗೇಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ನಗರಸಭಾ ಮಾಜಿ ಸದಸ್ಯ ಅನಿಲ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಸಿ.ಕೆ.ನಾಗರಾಜ್, ಬಿಳಿದೇಗಲು ಬೋರೇಗೌಡ, ಮಹಾದೇವ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ