ಮದ್ದೂರು ತಾಲ್ಲೂಕಿನ ಬೆಸಗರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಸೌಮ್ಯ ಸತೀಶ್ ಹಾಗೂ ಉಪಾಧ್ಯಕ್ಷರಾಗಿ ಗಿರಿಜಾ ದೇವೇಗೌಡ ಅವಿರೋಧವಾಗಿ ಇಂದು ಆಯ್ಕೆ ಆಗಿದ್ದಾರೆ.
ನೂತನವಾಗಿ ಆಯ್ಕೆಯಾದ ಅಧ್ಯಕ್ಷೆ ಸೌಮ್ಯ ಹಾಗೂ ಉಪಾಧ್ಯಕ್ಷೆ ಗಿರಿಜಾ ಅವರನ್ನು ಶಾಸಕ ಡಿ.ಸಿ. ತಮ್ಮಣ್ಣ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಶಾಸಕ ಡಿ.ಸಿ.ತಮ್ಮಣ್ಣ ಮಾತನಾಡಿ, ಇದೇ ಮೊದಲ ಬಾರಿಗೆ ಬೆಸಗರಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರು ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಿರುವುದು ಸಂತಸದ ವಿಚಾರ.ಎಲ್ಲಾ ಸದಸ್ಯರ ಸಹಕಾರ ಪಡೆದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿ ಪಡಿಸಲು ಮುಂದಾಗಬೇಕು ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.