ಕಳೆದ ವರ್ಷ ಮಂಡ್ಯ ಜಿಲ್ಲೆಯಲ್ಲಿ ನಡೆದ ಚುನಾವಣೆಗಳಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿ ರಾಜ್ಯ ಚುನಾವಣಾ ಆಯೋಗವು ಪ್ರದಾನ ಮಾಡಿದ 2024-25 ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ’ ಪ್ರಶಸ್ತಿಯನ್ನು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸ್ವೀಕರಿಸಿದರು.
ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.




