Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಕಟ

2023 ನೇ ಸಾಲಿನಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಒಟ್ಟು 10 ಜನರನ್ನು ಗುರುತಿಸಿ ಏಪ್ರಿಲ್ 21 ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಆಚರಿಸಿ ಮಂಡ್ಯ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ ನಾಗೇಶ್ ತಿಳಿಸಿದ್ದಾರೆ.

ವಾಣಿಜ್ಯ ತೆರಿಗೆ ಇಲಾಖೆ ಉಪ ಆಯುಕ್ತ ಎಂ ಬಾಲಸುಬ್ರಹ್ಮಣ್ಯ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮಂಜುನಾಥ ಡಿ ,ಪಾಂಡವಪುರ ಉಪ ವಿಭಾಗ ಉಪ ಕೃಷಿ ನಿರ್ದೇಶಕಿ ಎಚ್ಎನ್ ಮಮತಾ, ಕೊತ್ತತ್ತಿ ಪ್ರಾಥಮಿಕ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ. ಲಕ್ಷ್ಮೀಶ್, ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಶಾಖೆ ಸಹಾಯಕ ನಿರ್ದೇಶಕ ಸಿದ್ದರಾಜು, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಶ್ರೀನಿವಾಸ ಮೂರ್ತಿ ಎಂ.ಆರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಕಂದಾಯ ಇಲಾಖೆ ದ್ವಿತೀಯ ದರ್ಜೆ ಸಹಾಯಕ ಕಿಶೋರ್ ಎಂ.ಕೆ . ಗ್ರಾಮ ಆಡಳಿತ ಅಧಿಕಾರಿ ಮಂಜುಳಾ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಾಹನ ಚಾಲಕ ಪಿ. ಶ್ರೀಧರ್ ಹಾಗೂ ಕಂದಾಯ ಇಲಾಖೆ ವಾಹನ ಚಾಲಕ ಜೋಸೆಫ್ ಇವರಿಗೆ ಏಪ್ರಿಲ್ 21 ರಂದು ಸಂಜೆ 4 ಗಂಟೆಗೆ ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ