Friday, November 20, 2026

ಪ್ರಾಯೋಗಿಕ ಆವೃತ್ತಿ

ಬೇವಿನಹಳ್ಳಿ ಗ್ರಾ.ಪಂ. ಅಧ್ಯಕ್ಷರಾಗಿ ಲೋಕೇಶ್ ಅವಿರೋಧ ಆಯ್ಕೆ

ಮಂಡ್ಯ ತಾಲೂಕಿನ ಬೇವಿನಹಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆ ಇಂದು ನಡೆಯಿತು.

ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕ್ಯಾತುಂಗೆರೆ ಲೋಕೇಶ್ ಹಾಗೂ ಉಪಾಧ್ಯಕ್ಷರಾಗಿ ಮಂಜುಳ ಸುಭಾಷ್ ಅವರನ್ನು ಸದಸ್ಯರು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಆಯ್ಕೆಯಾಗಿ ಬರುತ್ತಿದ್ದಂತೆ ಲೋಕೇಶ್ ಅವರ ನೂರಾರು ಅಭಿಮಾನಿಗಳು ಪುಷ್ಪಾರ್ಚನೆ ಮಾಡಿ ಬರ ಮಾಡಿಕೊಂಡರು.

ಜಾತ್ಯಾತೀತ ಜನತಾದಳದ ಪ್ರಭಾವಿ ನಾಯಕರಾದ ಲೋಕೇಶ್ ಅವರಿಗೆ ನೂರಾರು ಮಂದಿ ಹಿತೈಷಿಗಳು, ಅಭಿಮಾನಿಗಳು ಸೇಬಿನ ಹಾರ ಸೇರಿದಂತೆ ಹಲವು ಬಗೆಯ ಹಾರಗಳನ್ನು ಹಾಕಿ ಸಂತಸ ವ್ಯಕ್ತಪಡಿಸಿದರು. ಅಲ್ಲದೆ ಬೇವಿನಹಳ್ಳಿಯ ಮಂಡ್ಯ-ಬನ್ನೂರು ರಸ್ತೆಯಲ್ಲಿ ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ನಡೆಸಿ ಅಭಿಮಾನ ವ್ಯಕ್ತಪಡಿಸಿದರು. ಪಟಾಕಿ ಸಿಡಿಸಿ, ನೃತ್ಯ ಪ್ರದರ್ಶನ ಮಾಡಿದ್ದು ನೆರೆದಿದ್ದವರ ಗಮನ ಸೆಳೆಯಿತು.

ಇದೇ ವೇಳೆ ಮಾತನಾಡಿದ ನೂತನ ಅಧ್ಯಕ್ಷ ಲೋಕೇಶ್ ಅವರು ಬೇವಿನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಲಾಗುವುದು. ರಸ್ತೆ, ಚರಂಡಿ, ಕುಡಿಯುವ ನೀರಿನ ವ್ಯವಸ್ಥೆ, ಕೆರೆಗಳ ಅಭಿವೃದ್ಧಿ, ಬೀದಿ ದೀಪ ಅಳವಡಿಸುವುದು ಸೇರಿದಂತೆ ಸಮಗ್ರ ಅಭಿವೃದ್ಧಿ ಕಡೆ ಗಮನ ಹರಿಸಲಾಗುವುದು ಎಂದು ತಿಳಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ