ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಲು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಮಂಡ್ಯಕ್ಕೆ ಆಗಮಿಸಲಿದ್ದಾರೆ.
ಭಾರತದ ಕನ್ಯಾಕುಮಾರಿಯಿಂದ ಕಾಶ್ಮೀರವರೆಗೆ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಯು ಪ್ರಸ್ತುತ ಕರ್ನಾಟಕಕ್ಕೆ ಪ್ರವೇಶ ಮಾಡಿದ್ದು, ಮೈಸೂರು ಜಿಲ್ಲೆಗೆ ತಲುಪಿದೆ, ಅ.3ರಂದು ಮಧ್ಯಾಹ್ನ ಮಂಡ್ಯ ಜಿಲ್ಲೆಗೆ ಆಗಮಿಸಲಿದೆ.
ಅ.4 ಮತ್ತು5ರಂದು ಆಯುಧ ಪೂಜೆ ಹಾಗೂ ವಿಜಯದಶಮಿ ಅಂಗವಾಗಿ ಯಾತ್ರೆಗೆ ವಿರಾಮವಿರಲಿದ್ದು, ಅ,6 ರಂದು ಮತ್ತೆ ಯಾತ್ರೆ ನಡೆಯಲಿದ್ದು, ಈ ಸಂದರ್ಭದಲ್ಲಿ ಪಾಂಡವಪುರ ಹಾಗೂ ನಾಗಮಂಗಲ ತಾಲ್ಲೂಕುಗಳಲ್ಲಿ ಯಾತ್ರೆ ನಡೆಯಲಿದೆ, ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಜೊತೆ ಹೆಜ್ಜೆ ಹಾಕಲು ಅವರ ಸಹೋದರಿ ಪ್ರಿಯಾಂಕ ಗಾಂಧಿ ಆಗಮಿಸಲಿದ್ಧಾರೆ ಎಂದು ಕೆಪಿಸಿಸಿ ಮೂಲಗಳು ಸ್ಟಷ್ಡಪಡಿಸಿವೆ.




