Tuesday, November 24, 2026

ಪ್ರಾಯೋಗಿಕ ಆವೃತ್ತಿ

ಭಾರತೀನಗರ ಗ್ರಾ.ಪಂ.ಉಪಾಧ್ಯಕ್ಷೆಯಾಗಿ ಮಹದೇವಮ್ಮ ಆಯ್ಕೆ

ಮದ್ದೂರು ತಾಲ್ಲೂಕಿನ ಭಾರತೀನಗರ ಗ್ರಾಮ ಪಂಚಾಯತಿಯ ನೂತನ ಉಪಾಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಮಹದೇವಮ್ಮ ಚೌಡಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸೌಭಾಗ್ಯ ಕಬ್ಬಾಳಯ್ಯ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಮಹಾದೇವಮ್ಮಚೌಡಯ್ಯ ಅವಿರೋಧವಾಗಿ ಆಯ್ಕೆಯಾದರು.

ಮಹಾದೇವಮ್ಮ ಅವರನ್ನು ಹೊರತು ಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾ ಅಧಿಕಾರಿ ತಾ.ಪಂ.ಇಓ ಸಂದೀಪ್ ಅವಿರೋಧ ಅಯ್ಕೆ ಮಾಡಿದರು.

ಈ ಸಂದರ್ಭದಲ್ಲಿ ಪಿಡಿಓ ಸುಧಾ,ಗ್ರಾ.ಪಂ.ಅದ್ಯಕ್ಷ ವಕ್ರತುಂಡ ವೆಂಕಟೇಶ್, ಮಾಜಿ ಅಧ್ಯಕ್ಷ ರವಿಚಂದ್ರ ,ಗ್ರಾ.ಪಂ.ಸದಸ್ಯರಾದ ಕೆ.ಟಿ.ಶ್ರೀನಿವಾಸ್, ಕೆ.ವಿ.ಶ್ರೀನಿವಾಸ್, ಮಿಥುನ್‌, ಮಂಜುನಾಥ್, ರಾಘವೇಂದ್ರ, ಸೌಮ್ಯ,ಸುವರ್ಣ,ಭಾರತೀ,ಕೌಶಲ್ಯ, ಗೌರಮ್ಮ,ಸೌಭಾಗ್ಯಮ್ಮ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ