Thursday, September 19, 2024

ಪ್ರಾಯೋಗಿಕ ಆವೃತ್ತಿ

ಸಂತ್ರಸ್ತೆ ಅಪಹರಣ | ಜಾಮೀನು ಕೋರಿ ನ್ಯಾಯಾಲಯಕ್ಕೆ ಭವಾನಿ ರೇವಣ್ಣ ಅರ್ಜಿ; ಇಂದು ವಿಚಾರಣೆ

ಲೈಂಗಿಕ ದೌರ್ಜನ್ಯ ಮತ್ತು ಸಂತ್ರಸ್ತೆ ಅಪಹರಣದ ಆರೋಪ ಎದುರಿಸುತ್ತಿರುವ ಎಚ್‌ಡಿ ರೇವಣ್ಣ ಕುಟುಂಬಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಕೆ ಆರ್‌ ನಗರದ ಸಂತ್ರಸ್ತೆಯೊಬ್ಬರು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್‌ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಬಂಧನ ಭೀತಿ ಎದುರಾಗಿದೆ.

ಸಂತ್ರಸ್ತೆ ತನ್ನ ಹೇಳಿಕೆಯಲ್ಲಿ ಭವಾನಿ ರೇವಣ್ಣರ ಹೆಸರು ಉಲ್ಲೇಖಿಸಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಭವಾನಿಗೆ ನೋಟಿಸ್ ನೀಡಿದ್ದಾರೆ.

ಇದೀಗ ಬೆಂಗಳೂರಿನ ಸೆಷನ್ಸ್ ಕೋರ್ಟ್‌ನಲ್ಲಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಆದರೆ ಅರ್ಜಿ ವಿಚಾರಣೆಯನ್ನು ಕೋರ್ಟ್ ಮಂಗಳವಾರಕ್ಕೆ ಮುಂದೂಡಿದೆ.

ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಭವಾನಿ ರೇವಣ್ಣ ಅವರ ಸಂಬಂಧಿ ಸತೀಶ್ ಬಾಬು ಹೇಳಿಕೆ ದಾಖಲಿಸಿಕೊಂಡಿದ್ದ ಎಸ್​ಐಟಿ, ಆತನ ಮೊಬೈಲ್ ವಶಕ್ಕೆ ಪಡೆದು ಕಾಲ್ ಡೀಟೆಲ್ಸ್ ಸಹ ಪರಿಶೀಲನೆ ಮಾಡಿತ್ತು. ಈ ವೇಳೆ ಭವಾನಿ ರೇವಣ್ಣ ಮತ್ತು ಸತೀಶ್ ಬಾಬು ಕರೆ ಬಗ್ಗೆ ಮಾಹಿತಿ ಸಿಕ್ಕಿತ್ತು. ಈ ಆಧಾರದ ಮೇಲೆ ಎಸ್​ಐಟಿ ಭವಾನಿ ಅವರನ್ನು ವಿಚಾರಣೆ ನಡೆಸಲು ನೋಟಿಸ್ ಜಾರಿ ಮಾಡಿತ್ತು.

ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣ ಅವರವನ್ನು ಎಸ್​ಐಟಿ ಬಂಧಿಸಿ ಜೈಲಿಗೆ ಕಳುಹಿಸಿತ್ತು. ಬಳಿಕ ರೇವಣ್ಣ ಅವರು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದೀಗ ಭವಾನಿ ಅವರಿಗೂ ಸಹ ಬಂಧನದ ಭೀತಿ ಶುರುವಾಗಿದ್ದರಿಂದ ಮುಂಜಾಗ್ರತ ಕ್ರಮವಾಗಿ ಜಾಮೀನು ಪಡೆಯಲು ಕೋರ್ಟ್​ ಮೆಟ್ಟಿಲೇರಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!