Friday, October 18, 2024

ಪ್ರಾಯೋಗಿಕ ಆವೃತ್ತಿ

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದತಿಗೆ ‘ಸುಪ್ರೀಂ’ ನಕಾರ

ಜೆಡಿಎಸ್ ಪಕ್ಷದ ಮಾಜಿ ಸಂಸದ, ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ರದ್ದುಪಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ವಲ್ ಭುಯಾನ್ ಅವರಿದ್ದ ನ್ಯಾಯಪೀಠವು ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ.

ವಿಚಾರಣೆ ನಡೆಸಿದ ನ್ಯಾಯಪೀಠ, ಈ ಪ್ರಕರಣದಲ್ಲಿ ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ, ರಾಜಕೀಯ ಕುಟುಂಬ ಎಂಬ ಕಾರಣಕ್ಕೆ ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲ ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು ಆದರೆ ಈ ಪ್ರಕರಣದಲ್ಲಿ ಅಂತಹ ಯಾವುದೇ ಅಂಶಗಳು ಕಾಣುತ್ತಿಲ್ಲ, ಒಂದು ವೇಳೆ ತನಿಖೆ ದಾರಿ ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು ಎಂದು ನ್ಯಾಯಪೀಠ ಹೇಳಿದೆ.

ಏನಿದು ಪ್ರಕರಣ?

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೊಗಳು ಕಳೆದ ಏಪ್ರಿಲ್ ತಿಂಗಳಲ್ಲಿ ಬಹಿರಂಗವಾಗಿದ್ದವು. ಒಂದು ವಿಡಿಯೊದಲ್ಲಿ ತನ್ನ ತಾಯಿಯ (ಸಂತ್ರಸ್ತೆ) ಚಿತ್ರವೂ ಇದ್ದು. ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಸಂತ್ರಸ್ತೆಯ ಪುತ್ರ ಹೆಚ್.ಡಿ. ರೇವಣ್ಣ, ಭವಾನಿ ರೇವಣ್ಣ ಮತ್ತು ಇವರ ಸಂಬಂಧಿ ಬಾಬು ವಿರುದ್ಧ ದೂರು ನೀಡಿದ್ದರು.

ಪ್ರಕರಣದ ತನಿಖೆ ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರನ್ನು ಬಂಧಿಸಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!