Friday, September 20, 2024

ಪ್ರಾಯೋಗಿಕ ಆವೃತ್ತಿ

ಸಂತ್ರಸ್ತೆ ಅಪಹರಣ ಪ್ರಕರಣ | ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಭವಾನಿ ರೇವಣ್ಣಗೆ ಬಂಧನದ ಭೀತಿ

ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಭವಾನಿ ರೇವಣ್ಣ ಅವರ ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ಭವಾನಿಯವರಿಗೆ ಬಂಧನ ಭೀತಿ ಎದುರಾಗಿದೆ.

ನಿರೀಕ್ಷಣಾ ಮತ್ತು ಸಾಮಾನ್ಯ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲದಯ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ನಡೆಸಿದರು. ಅರ್ಜಿಯ ವಿಚಾರಣೆ ನಡೆಸಿದ ಬಳಿಕ, ನ್ಯಾಯಾಧೀಶರು ವಜಾಗೊಳಿಸಿದ್ದಾರೆ. ಹೀಗಾಗಿ ಬಂಧನ ಭೀತಿ ಎದುರಾಗಿದೆ.

ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆ ಆರ್‌ ನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 364ಎ, 365 ಮತ್ತು 34ರ ಅಡಿ ಎಫ್‌ಐಆರ್‌ ದಾಖಲಿಸಲಾಗಿದೆ. ಇದರಲ್ಲಿ ಭವಾನಿ ಪತಿ ಎಚ್‌ ಡಿ ರೇವಣ್ಣ ಮೊದಲ ಆರೋಪಿಯಾಗಿದ್ದು, ಸತೀಶ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ. ಇದೇ ಪ್ರಕರಣದಲ್ಲಿ ಭವಾನಿ ಅವರು ಜಾಮೀನು ಕೋರಿದ್ದರು.

ಮನೆಯಿಂದ ನಾಪತ್ತೆ

ಪ್ರಜ್ವಲ್ ರೇವಣ್ಣ ಪ್ರಕರಣದ ಕುರಿತು ಎಸ್‌ಐಟಿ ತನಿಖೆ ಚಾಲ್ತಿಯಲ್ಲಿರುವಂತೆಯೇ ಅತ್ತ ಭವಾನಿ ರೇವಣ್ಣ ಅವರ ತವರು ಮನೆಗೆ ಕೂಡ ಬೀಗ ಜಡಿಯಲಾಗಿದ್ದು, ಈ ಬೃಹತ್ ಬಂಗಲೆ ಇದೀಗ ಖಾಲಿ ಇದೆ ಎಂದು ವರದಿಯಾಗಿದೆ.

ಈ ಮಧ್ಯೆ ಸಾಲಿಗ್ರಾಮದಲ್ಲಿರುವ ಭವಾನಿ ರೇವಣ್ಣರ ತವರು ಮನೆಗೂ ಬೀಗ ಹಾಕಲಾಗಿದೆ. ಮನೆಯ ಕುಟುಂಬದ ಸದಸ್ಯರು ಯಾರೂ ಇಲ್ಲ, ಬೃಹತ್ ಬಂಗಲೆ ಖಾಲಿಯಾಗಿದೆ ಎಂದು ತಿಳಿದುಬಂದಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!