Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಭೂಮಿ ಸಿದ್ದೇಶ್ವರಸ್ವಾಮಿ ದೇವಾಲಯದ ಪುನಃ ಪ್ರತಿಷ್ಠಾಪನೆ

ಮಂಡ್ಯ ತಾಲೂಕಿನ ಕೊತ್ತತ್ತಿ ಹೋಬಳಿಯ ಸಂತೆಕಸಲಗೆರೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭೂಮಿ ಸಿದ್ದೇಶ್ವರಸ್ವಾಮಿ ದೇವಾಲಯದ ಪುನಃ ಪ್ರತಿಷ್ಠಾಪನೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವವನ್ನು ಜನವರಿ 30ರಿಂದ ಫೆಬ್ರವರಿ 2 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎಸ್.ತಮ್ಮಣ್ಣ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಾಲಯಕ್ಕೆ ಹಲವು ವರ್ಷಗಳ ಇತಿಹಾಸವಿದ್ದು, ಜಿಲ್ಲೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭೂಮಿ ಸಿದ್ದೇಶ್ವರಸ್ವಾಮಿ ದೇವಾಲಯಗಳ ಪೈಕಿ ಎರಡನೆಯದ್ದಾಗಿದೆ. ಇದೀಗ ಈ ದೇವಾಲಯವನ್ನು 7 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಸರ್ಕಾರದಿಂದ 35 ಲಕ್ಷ ರೂ.ಗಳ ಅನುದಾನ ದೊರೆತಿದೆ ಎಂದರು.

ಫೆಬ್ರವರಿ 2ರಂದು ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಧರ್ಮಸ್ಥಳದ ಧರ್ಮದರ್ಶಿಗಳಾದ ವೀರೇಂದ್ರ ಹೆಗ್ಗಡೆ, ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ವಹಿಸುವರು. ವಿಶ್ವ ಒಕ್ಕಲಿಗ ಮಠದ ನಿಶ್ಚಲಾನಂದನಾಥ ಸ್ವಾಮಿಗಳು ಕಳಸ ಸ್ಥಾಪನೆ ಮಾಡಲಿದ್ದು, ವಿಶ್ವಮಾನವ ಕ್ಷೇತ್ರ ಚುಂಚನಗಿರಿ ಶಾಖಾ ಮಠದ ಪುರುಷೋತ್ತಮಾನಂದನಾಥ ಸ್ವಾಮೀಜಿ ಮೂಲ ದೇವರ ಪ್ರತಿಷ್ಠಾಪನೆ ನೆರವೇರಿಸುವರು ಎಂದು ಹೇಳಿದರು.

ದೇವಾಲಯದಲ್ಲಿ ಗಣಪತಿ ಮತ್ತು ಸುಬ್ರಹ್ಮಣ್ಯ ವಿಗ್ರಹಗಳನ್ನು ಭೂವರಾಹ ಸ್ವಾಮಿ ದೇವಾಲಯದ ಶ್ರೀನಿವಾಸ್ ರಾಘವನ್, ಖಾಸ್ಗತೇಶ್ವರ ಮಠದ ಪ.ಪೂ.ಸಿದ್ದಲಿಂಗದೇವರು ಪ್ರತಿಷ್ಠಾಪಿಸಲಿದ್ದು, ಶಾಸಕ ರಮೇಶ್ ಬಂಡಿಸಿದ್ದೇಗೌಡ ಅಧ್ಯಕ್ಷತೆ ವಹಿಸುವರು. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟನೆ ಮಾಡಲಿದ್ದು, ದೇವಾಲಯದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎಸ್.ತಮ್ಮಣ್ಣ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಪಿ.ರವಿಕುಮಾರ್, ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಎಂ.ಎಸ್.ಆತ್ಮಾನಂದ, ಮಾಜಿ ಶಾಸಕರುಗಳಾದ ರವೀಂದ್ರಶ್ರೀಕಂಠಯ್ಯ, ಅಪ್ಪಾಜಿಗೌಡ, ಎಂ.ಶ್ರೀನಿವಾಸ್, ಪ್ರಭಾವತಿ ಜಯರಾಂ, ಬಿಜೆಪಿ ಮುಖಂಡ ಸಚ್ಚಿದಾನಂದ, ಮನ್‌ಮುಲ್ ಅಧ್ಯಕ್ಷ ಬೋರೇಗೌಡ, ಉಪಾಧ್ಯಕ್ಷ ರಘುನಂದನ್, ಮಾಜಿ ಅಧ್ಯಕ್ಷ ರಾಮಂದ್ರ ಉಪಸ್ಥಿತರಿರಲಿದ್ದಾರೆ ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಸಮಿತಿಯ ಕಾರ್ಯದರ್ಶಿ ಬೋರೇಗೌಡ, ಖಜಾಂಚಿ ಚೇತನ್‌ಕುಮಾರ್, ಗವಿಗೌಡ, ಪ್ರಕಾಶ್, ಸಿದ್ದೇಗೌಡ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ