Sunday, November 22, 2026

ಪ್ರಾಯೋಗಿಕ ಆವೃತ್ತಿ

ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಭೂಷಣ್ ರಾಮಕೃಷ್ಣ ಗವಾಯಿ ಪ್ರಮಾಣ ವಚನ

ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಬುಧವಾರ ಭಾರತದ 52 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು.

ಮಂಗಳವಾರ ನಿವೃತ್ತರಾದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ನಂತರ ಗವಾಯಿ ಅಧಿಕಾರ ವಹಿಸಿಕೊಳ್ಳುತ್ತಾರೆ. ನವೆಂಬರ್ 23 ರಂದು ನಿವೃತ್ತರಾಗಲಿರುವ ಬಿಆರ್ ಗವಾಯಿ ಅವರು ಆರು ತಿಂಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ.

ಉಪರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಸಮಾರಂಭದಲ್ಲಿ ಭಾಗವಹಿಸಿದ್ದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“>

 

ನಿವೃತ್ತಿಯ ನಂತರದ ಕೆಲಸವನ್ನು ವಹಿಸಿಕೊಳ್ಳುವುದಿಲ್ಲ: ನಿರ್ಗಮಿತ ಸಿಜೆಐ

ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮಂಗಳವಾರ ನಿವೃತ್ತಿಯ ನಂತರದ ಯಾವುದೇ ಕೆಲಸವನ್ನು ವಹಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

“ನಾನು ನಿವೃತ್ತಿಯ ನಂತರದ ಯಾವುದೇ ಹುದ್ದೆಗಳನ್ನು ಸ್ವೀಕರಿಸುವುದಿಲ್ಲ. ಆದರೆ ಬಹುಶಃ ನನ್ನ ಮೂರನೇ ಇನ್ನಿಂಗ್ಸ್‌ನಲ್ಲಿ ನಾನು ಕಾನೂನಿಗೆ ಸಂಬಂಧಿಸಿದ ಏನಾದರೂ ಮಾಡುತ್ತೇನೆ” ಎಂದು ಖನ್ನಾ ಹೇಳಿರುವುದಾಗಿ ಉಲ್ಲೇಖಿಸಲಾಗಿದೆ.

ಅವರ ಈ ಹೇಳಿಕೆಯು ಅವರ ಹಿಂದಿನ ಕೆಲವು ಮುಖ್ಯ ನ್ಯಾಯಮೂರ್ತಿಗಳಿಗಿಂತ ಭಿನ್ನವಾಗಿದೆ. ಅವರ ಹಿಂದಿನ ಮುಖ್ಯ ನ್ಯಾಯಮೂರ್ತಿಗಳು ನಿವೃತ್ತಿಯ ನಂತರ ರಾಜ್ಯಪಾಲರು ಅಥವಾ ರಾಜ್ಯಸಭಾ ಸದಸ್ಯರಂತಹ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಉದಾಹರಣೆಗೆ ಮಾಜಿ ಮುಖ್ಯ ನ್ಯಾಯಮೂರ್ತಿಗಳಾದ ಪಿ ಸದಾಶಿವಂ ಮತ್ತು ರಂಜನ್ ಗೊಗೊಯ್.

ಕೃಪೆ : ನಾನು ಗೌರಿ.ಕಾಂ

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ