Saturday, November 21, 2026

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ | ಭೂವರಹನಾಥ ಕಲ್ಲಹಳ್ಳಿಗೆ ಹರಿದು ಬಂದ ಜನತೆ

ವರಹಾ ಜಯಂತಿಯ ಅಂಗವಾಗಿ ಕೃಷ್ಣರಾಜಪೇಟೆ ತಾಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಭೂವರಹನಾಥ ಕಲ್ಲಹಳ್ಳಿಗೆ ಸುಮಾರು 25 ಸಾವಿರಕ್ಕೂ ಹೆಚ್ಚಿನ ಭಕ್ತರು ಆಗಮಿಸಿದ್ದರು. ಭೂದೇವಿ ಸಮೇತ ಶ್ರೀ ಲಕ್ಷ್ಮೀವರಹನಾಥ ಸ್ವಾಮಿ ದರ್ಶನ ಪಡೆದರು. ಹೋಳಿಗೆ, ಪುಳಿಯೋಗರೆ, ಸಿಹಿಪೊಂಗಲ್, ಮೊಸರನ್ನ ಹಾಗೂ ಬಿಸಿಬೇಳೆ ಭಾತ್ ಪ್ರಸಾದ ಸವಿದ ಭಕ್ತರು.

ದೇವಾಲಯ ವ್ಯವಸ್ಥಾಪನಾ ಸಮಿತಿಯ ಸಂಚಾಲಕ ಡಾ. ಶ್ರೀನಿವಾಸರಾಘವನ್ ಪೂಜಾ ಕಾರ್ಯಕ್ರಮಗಳ ನೇತೃತ್ವ ವಹಿಸಿ ಮಾತನಾಡಿ, ರೇವತಿ ನಕ್ಷತ್ರ ಹಾಗೂ ವರಹಾ ಜಯಂತಿಯು ಒಂದೇ ದಿನದ ಏಕಕಾಲದಲ್ಲಿ ಬಂದಿರುವ ಈ ಶುಭ ದಿನದಲ್ಲಿ ಭೂ ವ್ಯಾಜ್ಯಗಳ ಪರಿಹಾರಕ ಹಾಗೂ ಲೋಕರಕ್ಷಕನಾದ ವರಹಾ ಸ್ವಾಮಿಗೆ ಇಂದು ವಿಶೇಷ ಪೂಜೆ ಸಲ್ಲಿಸಿ ಹೋಮ ಹವನದ ಮೂಲಕ ಲೋಕದ ಕಲ್ಯಾಣಕ್ಕಾಗಿ ಪ್ರಾರ್ಥಿಸಲಾಗಿದೆ ಎಂದರು.

150ಕೋಟಿ ರೂಪಾಯಿಗಳ ವೆಚ್ಚದಲ್ಲಿ ಭೂ ವರಾಹನಾಥ ಸ್ವಾಮಿಗೆ ತಿರುಮಲ ತಿರುಪತಿಯ ಮಾದರಿಯಲ್ಲಿ ಮೂರು ಪ್ರಾಕಾರಗಳ ದೇವಾಲಯವನ್ನು ಸಂಪೂರ್ಣವಾಗಿ ಗ್ರಾನೈಟ್ ಕಲ್ಲಿನಿಂದ ಹೊಯ್ಸಳ ವಾಸ್ತು ವೈಭವದ ಮಾದರಿಯಲ್ಲಿ ನಿರ್ಮಿಸಲಾಗುತ್ತಿದೆ. ಇನ್ನು ಮೂರು ವರ್ಷಗಳಲ್ಲಿ ದೇವಾಲಯದ ಕೆಲಸವನ್ನು ಸಂಪೂರ್ಣಗೊಳಿಸಲು ಸಂಕಲ್ಪ ಮಾಡಿರುವ ಪರಕಾಲ ಸ್ವಾಮಿಗಳು ಕ್ಷೇತ್ರಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಎಲ್ಲಾ ರೀತಿಯ ಅನುಕೂಲಗಳನ್ನು ಒದಗಿಸಿಕೊಡಲು ಕಾರ್ಯಕ್ರಮ ರೂಪಿಸಿದ್ದಾರೆ ಎಂದು ಹೇಳಿದರು.

ಇಂದಿನ ವಿಶೇಷ ಪೂಜಾ ಕಾರ್ಯಕ್ರಮಕ್ಕೆ ರಾಜ್ಯದ ಮಾಜಿ ಸಚಿವ ಡಾ. ನಾರಾಯಣಗೌಡ, ಸಮಾಜ ಸೇವಕ ಮಲ್ಲಿಕಾರ್ಜುನ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್.ಎಂ.ರೇವಣ್ಣ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮಿರಾಜಶೇಖರ್, ಪೊಲೀಸ್ ಇನ್ಸ್ ಪೆಕ್ಟರ್ ಗಳಾದ ಸುಮಾರಾಣಿ, ಆನಂದೇಗೌಡ, ಮೂಡಾ ಮಾಜಿ ಅಧ್ಯಕ್ಷ ಕೆ. ಶ್ರೀನಿವಾಸ್, ಸಂಸ್ಕೃತಿ ಸಂಘಟಕ ಗೋಪಾಲಕೃಷ್ಣ ಅವಧಾನಿಗಳು ಸೇರಿದಂತೆ ನಾಡಿನ ವಿವಿಧ ಭಾಗಗಳಿಂದ ಜನರು ಆಗಮಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ