Tuesday, November 24, 2026

ಪ್ರಾಯೋಗಿಕ ಆವೃತ್ತಿ

ಬಿಹಾರ ವಿಧಾನಸಭಾ ಚುನಾವಣೆ : ನ.6, 11 ಕ್ಕೆ ಎರಡು ಹಂತದಲ್ಲಿ ಮತದಾನ

ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ನವೆಂಬರ್‌ 6 ಹಾಗೂ 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 14 ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಚುನಾವಣಾ ವಿವರಗಳನ್ನು ನೀಡಿದ್ದಾರೆ.

ಮೊದಲ ಹಂತದಲ್ಲಿ 121 ಹಾಗೂ ಎರಡನೇ ಹಂತದಲ್ಲಿ 122 ವಿಧಾನಸಭೆ ಸ್ಥಾನಗಳಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 10ರಂದು ಮೊದಲನೇ ಹಂತಕ್ಕೆ ಹಾಗೂ ಅಕ್ಟೋಬರ್ 13ರಂದು ಎರಡನೇ ಹಂತಕ್ಕೆ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 17 (ಮೊದಲನೇ ಹಂತ) ಹಾಗೂ ಅಕ್ಟೋಬರ್ 20 (ಎರಡನೇ ಹಂತ) ಕೊನೆಯ ದಿನಾಂಕವಾಗಿದೆ ಎಂದರು.

ಒಟ್ಟು 243 ಕ್ಷೇತ್ರಗಳಿದ್ದು, 7.43 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ಈ ಪೈಕಿ 3.29 ಕೋಟಿ ಪುರುಷ ಮತದಾರರಿದ್ದರೆ, 3.50 ಕೋಟಿ ಮಹಿಳಾ ಮತದಾರರಿದ್ದಾರೆ. ಮೊದಲ ಬಾರಿಗೆ 14 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ. ನ.6ರಂದು 121 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆದರೆ ನ.11ರಂದು 122 ಕ್ಷೇತ್ರಗಳಿಗೆ ಎರಡನೇ ಹಂತದ ನಡೆಯಲಿದೆ.

ಮೊದಲನೇ ಹಂತಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 17; ಎರಡನೇ ಹಂತಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 20 ಆಗಿರುತ್ತದೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ: ಮೊದಲನೇ ಹಂತಕ್ಕೆ ಅಕ್ಟೋಬರ್ 20; ಎರಡನೇ ಹಂತಕ್ಕೆ ಅಕ್ಟೋಬರ್ 23 ಆಗಿರುತ್ತದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ