Saturday, November 21, 2026

ಪ್ರಾಯೋಗಿಕ ಆವೃತ್ತಿ

ಬಿಹಾರ | ಮತದಾರರ ಪಟ್ಟಿ ಪರಿಷ್ಕರಣೆ ಪ್ರಶ್ನಿಸಿದ ಅರ್ಜಿಗಳ ವಿಚಾರಣೆಗೆ ‘ಸುಪ್ರೀಂ’ ಅಸ್ತು

ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಬಿಹಾರದಲ್ಲಿ ಮತದಾರರ ಪಟ್ಟಿಯನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲು ಭಾರತೀಯ ಚುನಾವಣಾ ಆಯೋಗ ಕೈಗೊಂಡ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿರುವ ವಿವಿಧ ಅರ್ಜಿಗಳ ವಿಚಾರಣೆಯನ್ನು ಜುಲೈ 10ರಂದು ನಡೆಸುವುದಾಗಿ ಸುಪ್ರೀಂ ಕೋರ್ಟ್‌‌ ಸೋಮವಾರ ಹೇಳಿದೆ.

ಪ್ರಕರಣವನ್ನು ತುರ್ತಾಗಿ ಆಲಿಸುವಂತೆ ಹಿರಿಯ ವಕೀಲಕಪಿಲ್ ಸಿಬಲ್ ಅವರು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ರಜಾಕಾಲೀನ ಪೀಠದೆದುರು ಪ್ರಸ್ತಾಪಿಸಿದರು.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಶ್ನಿಸಿ ಸುಪ್ರೀಂಗೆ ಎನ್‌ಜಿಒ ಅರ್ಜಿ ಆಗ ಈ ಗುರುವಾರ ಅಂದರೆ ಜು.10 ರಂದು ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿತು. ಸಿಬಲ್ ಅವರೊಂದಿಗೆ ಹಿರಿಯ ವಕೀಲರಾದ ಡಾ. ಅಭಿಷೇಕ್ ಮನು ಸಿಂಘ್ವಿ , ಗೋಪಾಲ್ ಶಂಕರನಾರಾಯಣನ್ ಹಾಗೂ ಶಾದನ್ ಫರಾಸತ್ ಕೂಡ ಈ ವೇಳೆ ಹಾಜರಿದ್ದರು.
ಇವಿಎಂ ದತ್ತಾಂಶ ಅಳಿಸುವುದಿಲ್ಲ: ಸುಪ್ರೀಂ ಕೋರ್ಟ್‌ಗೆ ಇಸಿಐ ಆಶ್ವಾಸನೆ

ಬಿಹಾರದ ಬಹುತೇಕ ಮತಾದಾರರು ತಾವು ಮತದಾರರ ಪಟ್ಟಿಯಲ್ಲಿ ಉಳಿಯಬೇಕು ಎನ್ನುವುದಾದರೆ ಪೌರತ್ವಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಬೇಕಾಗುತ್ತದೆ ಎಂದು ಆಯೋಗ ಜೂನ್ 24ರಂದು ಆದೇಶ ಹೊರಡಿಸಿತ್ತು.

ಈ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸರ್ಕಾರೇತರ ಸಂಸ್ಥೆಯಾದ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್, ಸಂಸದರಾದ ಮಹುವಾ ಮೊಯಿತ್ರಾ, ಮನೋಜ್ ಝಾ ಹಾಗೂ ಹೋರಾಟಗಾರ ಯೋಗೇಂದ್ರ ಯಾದವ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಕೃಪೆ : ಬಾರ್ & ಬೆಂಚ್

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ