Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾವೇರಿ ಹೋರಾಟ: ನೀರು ಸ್ಥಗಿತಕ್ಕೆ ಆಗ್ರಹಿಸಿ ಬೈಕ್ ರ್‍ಯಾಲಿ

ನೆರೆ ರಾಜ್ಯಕ್ಕೆ ಹರಿಸುತ್ತಿರುವ ನೀರು ಸ್ಥಗಿತ  ಮಾಡುವಂತೆ ಆಗ್ರಹಿಸಿ ನಿರಂತರ ಹೋರಾಟ ಮಾಡುತ್ತಿದ್ದರೂ ರಾಜ್ಯ ಸರ್ಕಾರ ಕದ್ದು ಮುಚ್ಚಿ ನೀರು ಹರಿಸುತ್ತಿರುವುದನ್ನು ಕೂಡಲೇ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ಮಂಡ್ಯನಗರದಲ್ಲಿ ಹೋರಾಟಗಾರರು ಬೈಕ್ ರ್‍ಯಾಲಿ ನಡೆಸಿದರು.

ಮಂಡ್ಯ ನಗರದ ಸರ್ ಎಂ ವಿ ಪ್ರತಿಮೆ ಬಳಿಯಿಂದ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಆಶ್ರಯದಲ್ಲಿ ರೈತರು, ಕನ್ನಡ, ಪ್ರಗತಿಪರ ಹೋರಾಟಗಾರರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಬೈಕ್ ರ್‍ಯಾಲಿ
ಹೊರಟು ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕೇಂದ್ರ – ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ಸರ್ಕಾರಕ್ಕೆ ರೈತರ ಬಗ್ಗೆ ಇಷ್ಟೊಂದು ಪ್ರಮಾಣದಲ್ಲಿ ಉದಾಸೀನತೆ ಇರಬಾರದು, ನೀರು ಉಳಿಸಿಕೊಳ್ಳುವ ಮೂಲಕ ರೈತರ ಹಿತ ಕಾಪಾಡಲು ಮುಂದಾಗಬೇಕು. ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಲು ಮೀನಾ ಮೇಷ ಮಾಡುತ್ತಿರುವುದು ಏತಕ್ಕೆ, ಒಕ್ಕೂಟ ವ್ಯವಸ್ಥೆಯಲ್ಲಿ ಎರಡು ರಾಜ್ಯಗಳ ನಡುವೆ ಸಂಘರ್ಷದ ವಾತಾವರಣ ಸೃಷ್ಟಿಯಾದಾಗ ಪರಿಹಾರ ರೂಪಿಸಬೇಕಾದುದು ಆಳುವ ಸರ್ಕಾರದ ಕರ್ತವ್ಯ ಎಂಬುದನ್ನ ಮರೆತಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ದಸರಾ ಮಹೋತ್ಸವದಲ್ಲಿ ರೈತರನ್ನು  ಮರೆತಿದ್ದರೆ ಕೇಂದ್ರ ಸರ್ಕಾರ ಕಂಡು ಕಾಣದಂತೆ ಸುಮ್ಮನಿದೆ. ಮುಂದಿನ ದಿನಗಳಲ್ಲಿ ಕಾವೇರಿ ಹೋರಾಟವನ್ನು ತೀವ್ರ  ಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಸಮಿತಿಯ ಸುನಂದಾ ಜಯರಾಂ, ರೈತ ಸಂಘದ ಇಂಡವಾಳು ಚಂದ್ರಶೇಖರ್, ಮುದ್ದೇಗೌಡ, ಕನ್ನಡ ಸೇನೆ ಮಂಜುನಾಥ್, ಮೀರಾ ಶಿವಲಿಂಗಯ್ಯ, ಬೇಕ್ರಿ ರಮೇಶ್, ದಸಂಸ ಎಂ ವಿ ಕೃಷ್ಣ, ಶಿವಶಂಕರ್, ಫಯಾಜ್ ನೇತೃತ್ವ ವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!