ಮದ್ದೂರು ತಾಲ್ಲೂಕಿನ ಅಂಬರಹಳ್ಳಿ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 30 ಶಾಲೆ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಶುಕ್ರವಾರ ನಡೆದಿದೆ.
ಬಿಸಿಯೂಟ ಸೇವಿಸಿದ ಮಕ್ಕಳು ಇದಕ್ಕಿದ್ದಂತೆ ವಾಂತಿ ಮಾಡಿಕೊಳ್ಳಲು ಪ್ರಾರಂಭಿಸಿದ್ದರಿಂದ ಅವರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಯಿತು. ಎಲ್ಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಅಡುಗೆ ಸಿಬ್ಬಂದಿಯವರ ಬೇಜಾವಾಬ್ದಾರಿಯೇ ಇಂತಹ ಘಟನೆಗೆ ಕಾರಣವಾಗಿದೆ ಎಂದು ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ಧಾರೆ.




