Wednesday, June 12, 2024

ಪ್ರಾಯೋಗಿಕ ಆವೃತ್ತಿ

ಬಿಜೆಪಿ ಅಭ್ಯರ್ಥಿ ವಿರುದ್ಧ ಮತ ಚಲಾಯಿಸಲು ಮನವಿ

ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಪ್ರಜ್ಞಾವಂತರಾದ ಪದವೀಧರ ಮತದಾರರು ಈ ಬಾರಿ ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ತಿರಸ್ಕರಿಸಿ ಅವರ ವಿರುದ್ಧ ಮತ ಚಲಾಯಿಸಲು ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ಹೇಳಿದರು.

ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಪದವೀಧರರಿಗೆ ಬಹಳ ಮೋಸ, ವಂಚನೆ, ನಂಬಿಕೆ ದ್ರೋಹ ಮಾಡಿದೆ. ಹಾಗೆ ನಿರುದ್ಯೋಗ ಸಮಸ್ಯೆಯಿಂದ ಪದವೀಧರರು ಉದ್ಯೋಗವಿಲ್ಲದೆ ಅಲೆಯುತ್ತಿದ್ದಾರೆ.

ಅವರ ಬದುಕು ಬೀದಿಗೆ ಬಿದ್ದಿದೆ. ಅಲ್ಲದೇ ಇತ್ತೀಚೆಗೆ ಪಿಎಸ್‌ಐ ನೇಮಕಾತಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದು ಪದವೀಧರ ಅಭ್ಯರ್ಥಿಗಳಿಗೆ ಬಹಳ ಅನ್ಯಾಯವಾಗಿದೆ.

ಈ ಪ್ರಕರಣದಿಂದ ಸಾವಿರಾರು ಪದವೀಧರ ವಿದ್ಯಾರ್ಥಿಗಳ ಬದುಕು ಮೂರಾಬಟ್ಟೆಯಾಗಿದೆ. ಈ ಪ್ರಕರಣವನ್ನು ಬಿಜೆಪಿ ನೇತೃತ್ವದ ಸರ್ಕಾರ ಪಾರದರ್ಶಕವಾಗಿ ನಿರ್ವಹಿಸಿದೆ. ಇಷ್ಟು ಬೃಹತ್ ಹಗರಣವಾಗಿದ್ದರೂ ಸರ್ಕಾರದ ಸಂಬಂಧಪಟ್ಟ ಸಚಿವರು ಹಾಗೂ ಉನ್ನತ ಅಧಿಕಾರಿಗಳು ಒಬ್ಬರೂ ರಾಜಿನಾಮೆ ನೀಡಿಲ್ಲ. ಸಣ್ಣಪಟ್ಟ ಅಧಿಕಾರಿಗಳನ್ನು ಬಂಧಿಸಿ ಪದವೀಧರರ ಕಣ್ಣಿಗೆ ಮಣ್ಣೆರುಚುವ ಕೆಲಸವನ್ನು ಸರ್ಕಾರ ಮಾಡಿದೆ ಎಂದು ಕಿಡಿಕಾರಿದರು.

ಮಧು ಜಿ.ಮಾದೇಗೌಡರಿಗೆ ಬೆಂಬಲ

ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲೂ ತನ್ನ ಛಾಪನ್ನು ಮೂಡಿಸಿದ ಡಾ. ಜಿ.ಮಾದೇಗೌಡ ರವರು, ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ಅಧ್ಯಕ್ಷರಾಗಿ, ಕಾವೇರಿ ನೀರಿಗಾಗಿ, ರೈತರ ಹಿತರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು.

ಇಂತಹ ಮಹನೀಯರ ಪುತ್ರರಾದ, ಮಧು ಜಿ.ಮಾದೇಗೌಡ ರವರನ್ನು ಈ ಬಾರಿ ನಾವು ಬೆಂಬಲಿಸಲು ತೀರ್ಮಾನಿಸಿದ್ದೇವೆ. ಆದ್ದರಿಂದ ಪದವಿಧರ ಬಂಧುಗಳು ಬಿಜೆಪಿ ಸರ್ಕಾರದ ಅನಾಚಾರಗಳನ್ನು ಮನಗಂಡು ಹಾಗೂ ಡಾ.ಜಿ.ಮಾದೇಗೌಡರವರ ಸೇವೆಯನ್ನು ಪರಿಗಣಿಸಿ, ಅವರ ಮಗ ಮಧು ಅವರನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಎನ್.ಆರ್.ನಾಗೇಶ್, ಪ್ರಕಾಶ್, ಯೋಗೇಶ್ ಉಪ್ಪಾರ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!