ದಕ್ಷಿಣ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಅವರು ಕಳೆದ ಬಾರಿ ಅಲ್ಪ ಮತಗಳ ಅಂತರದಿಂದ ಸೋತಿರುವುದು ಪದವೀಧರ ಮತದಾರರಿಗೆ ತಿಳಿದಿದ್ದು, ಈ ಬಾರಿ ಪದವೀಧರ ಮತದಾರರು ಭರ್ಜರಿಯಾಗಿ ಗೆಲ್ಲಿಸುವ ವಿಶ್ವಾಸವಿದೆ ಎಂದು ಬಿಜೆಪಿ ಮುಖಂಡ ಎಂ.ಆರ್.ಕುಮಾರಸ್ವಾಮಿ ತಿಳಿಸಿದರು.
ಪಾಂಡವಪುರ ಪಟ್ಟಣದಲ್ಲಿ ಮತಯಾಚನೆ ಸಂದರ್ಭದಲ್ಲಿ ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಸರ್ಕಾರದ ಸಾಧನೆ ಹಾಗೂ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಆಡಳಿತವನ್ನು ಮತದಾರರಿಗೆ ಮನವರಿಕೆ ಮಾಡಿ, ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಅವರಿಗೆ ಮೊದಲ ಪ್ರಾಶಸ್ತ್ಯದ ಮತಗಳನ್ನು ನೀಡಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡುತ್ತೇನೆ ಎಂದರು.
ದೇಶ ಹಾಗೂ ಪದವೀಧರರ ಬಗ್ಗೆ ಅಪಾರ ಕಾಳಜಿ ಇಟ್ಟುಕೊಂಡಿರುವ ನಮ್ಮ ಪಕ್ಷದ ಅಭ್ಯರ್ಥಿ ಮೈ.ವಿ.ರವಿಶಂಕರ್ ಅವರು ಭರ್ಜರಿಯಾಗಿ ಗೆಲ್ಲುತ್ತಾರೆ ಎಂದು ಎಂ.ಆರ್.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.