Friday, September 20, 2024

ಪ್ರಾಯೋಗಿಕ ಆವೃತ್ತಿ

ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ಮಂಡನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಅಧಿಕಾರ ಅವಧಿಯ ಎರಡನೆಯ ಹಾಗೂ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ಮಂಡನೆ ಮಾಡಿದರು. ಹಣಕಾಸೂ ಸಚಿವರು ಆಗಿರುವ ಮುಖ್ಯಮಂತ್ರಿಗಳು 3,09,182 ಕೋಟಿ ರೂಪಾಯಿಗಳ ಬೃಹತ್ ಬಜೆಟ್ ಮಂಡಿಸಿದರು.

ರಾಷ್ಟ್ರಕವಿ ಕುವೆಂಪು ಅವರ ಕವಿತೆ ವಾಚನೆ ಮಾಡುವ ಮೂಲಕ ಮುಖ್ಯಮಂತ್ರಿಗಳು ಬಜೆಟ್ ಆರಂಭಿಸಿದರು.

“ಹೋಗುತಿದೆ ಹಳೆಯ ಕಾಲ, ಹೊಸ ಕಾಲ ಬರುತಲಿದೆ, ಬರುತಲಿದೆ ಹೊಸ ದೃಷ್ಟಿ, ಹೊಸ ಬಯಕೆಗಳಲ್ಲಿ ಹೋಗುತಿದೆ ಹಳೆ
ಬಾಳು, ಹೊಸ ಬಾಳು ಬರುತಲಿದೆ’ ಎನ್ನುವ ಸಾಲುಗಳನ್ನು ಉಲ್ಲೇಖಿಸಿ ಬಜೆಟ್ ಭಾಷಣ ಆರಂಭಿಸಿದರು.

“ಈ ಆಯವ್ಯಯವು ಅಭಿವೃದ್ಧಿ ಮತ್ತು ಉತ್ತಮ ಭವಿಷ್ಯದ ಭರವಸೆಯಾಗಿದೆ. ಈ ಆರ್ಥಿಕ ವರ್ಷದಲ್ಲಿ ಕರ್ನಾಟಕದ ಉಜ್ವಲ ಭವಿಷ್ಯವನ್ನು ರೂಪಿಸುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿರುವ ಸಾರ್ಥಕ ಭಾವದೊಂದಿಗೆ, ಮುಂದಿನ 25 ವರ್ಷಗಳ ಅಮೃತ ಕಾಲದಲ್ಲಿ ನಮ್ಮ ಕರ್ತವ್ಯಗಳು, ಗುರಿಗಳು ಹಾಗೂ ಫಲಿತಾಂಶಗಳ ಆಯವ್ಯಯವನ್ನು ಮಂಡಿಸುತ್ತಿದ್ದೇನೆ’ ಎಂದು ತಿಳಿಸಿದರು.

ಉಳಿದಂತೆ ನಿರೀಕ್ಷಿತ ಚುನಾವಣಾಯನ್ನೇ ಗುರಿಯಾಗಿಸಿಕೊಂಡು ರೈತ ಮಹಿಳೆ ಮತದಾರರ ಓಲೈಕೆಯ ಬಜೆಟ್ ಮಂಡಿಸಿದರು.

ಹಾಲಿ ಬಜೆಟ್‌ನಲ್ಲಿ ರೈತರಿಗೆ ಭರಪೂರ ಕೊಡುಗೆಯನ್ನು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಅದರಲ್ಲಿ ಮುಖ್ಯವಾದದ್ದು.
ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ 5 ಲಕ್ಷ ರೂಪಾಯಿ ಸಾಲ ಘೋಷಣೆ ಮಾಡಿದರು. ಇದರಿಂದ 30 ಲಕ್ಷಕ್ಕಿಂತ ಹೆಚ್ಚು ರೈತರಿಗೆ 5 ಲಕ್ಷ ರೂ. ಸಾಲ ನೀಡಲಾಗುವ ಭರವಸೆಯನ್ನು ಅವರು ನೀಡಿದರು. ಈ ಹಿಂದೆ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂಪಾಯಿಗಳ ಸಾಲ ನೀಡಲಾಗುತ್ತಿತ್ತು. ಈಗ ಸಾಲದ ಮೊತ್ತವನ್ನು 5ಲಕ್ಷಕೆ ಎರಿಸಲಾಗಿದೆ. ಹಾಗೆಯೇ ಬೆಳೆಗಳ ಸಂರಕ್ಷಣೆ ಹಾಗೂ ಶೇಖರಣೆಗೆ 175 ಕೋಟಿ ರೂ. ಮಂಜೂರು ಮಾಡಲಾಗಿದೆ.

ಬೊಮ್ಮಾಯಿ ಬಜೆಟ್‌ನ ಮುಖ್ಯ ಅಂಶಗಳು ಹೀಗಿವೆ:

ಬಳ್ಳಾರಿಯಲ್ಲಿ 100 ಕೋಟಿ ವೆಚ್ಚದಲ್ಲಿ ಮೆಗಾಡೈರಿ ನಿರ್ಮಾಣ, ಹಾವೇರಿಯಲ್ಲಿ ಮೀನುಪಾಲನಾ ಕೇಂದ್ರ ಭೂಸಿರಿ ಯೋಜನೆಯಲ್ಲಿ 10 ಸಾವಿರ ರೂ. ಹೆಚ್ಚುವರಿ ಸಹಾಯ, ಗ್ರಾಮೀಣಾಭಿವೃದ್ಧಿ ಇಲಾಖೆಗೆ 20,494 ಕೋಟಿ ರೂ ಅನುದಾನ:

ಮಹಿಳಾ ಸಬಲೀಕರಣಕ್ಕೆ ಆದ್ಯತೆ, ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್, ಮಹಿಳಾ ಕಾರ್ಮಿಕರಿಗೆ 500 ರೂ ಸಹಾಯಧನ, 30 ಲಕ್ಷ ಮಹಿಳೆಯರಿಗೆ ಉಚಿತ ಪಾಸ್‌;

ಅರೆಮಲೆನಾಡು ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗಾಗಿ ಬಾವಿ, ಕಿಂಡಿ, ಅಣೆ, ನಾಲಾ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನ. ಈ ಎರಡೂ ಯೋಜನೆಗಳಿಗೆ 75 ಕೋಟಿ ರೂ. ಅನುದಾನ ಮೀಸಲು

ರೈತರ ಜಮೀನುಗಳಲ್ಲಿ ಜಲಹೊಂಡ ನಿರ್ಮಿಸಿ ನೀರು ಸಂರಕ್ಷಣೆಗೆ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ‘ಜಲನಿಧಿ ಎಂಬ ಹೊಸ ಯೋಜನೆಯ ಪ್ರಾರಂಭ; ನರೇಗಾ ಯೋಜನೆಯ ಸಮನ್ವಯದೊಂದಿಗೆ ರೈತರಿಗೆ ಜಮೀನಿನಲ್ಲಿ ಜಲಹೊಂಡವನ್ನು ನಿರ್ಮಿಸಲು ಪ್ರೋತ್ಸಾಹ;

ರಾಜ್ಯ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆಗಳನ್ನು ಮುಖ್ಯಮಂತ್ರಿಗಳು ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿಗಳ ಅನುದಾನ ಘೋಷಣೆ ಮಾಡಿದರು;

ಧಾರ್ಮಿಕ ದತ್ತಿ ಇಲಾಖೆಯ ಜಮೀನುಗಳ ವರ್ಷಾಶನದಲ್ಲಿ 6000 ರೂ. ಹೆಚ್ಚಳ, ರಾಮನಗರದಲ್ಲಿ ಬೃಹತ್ ರಾಮಮಂದಿರ ನಿರ್ಮಾಣ,

350 ಕೋಟಿ ರೂಪಾಯಿ ವೆಚ್ಚದಲ್ಲಿ ಉಚಿತ ಬಸ್ ಪಾಸ್ ಶೂನ್ಯ ಬಡ್ಡಿದರದಲ್ಲಿ ಮಹಿಳೆಯರಿಗೆ ಸಾಲ ಸೌಲಭ್ಯ ಯೋಜನೆ ಗೃಹಿಣಿಯರಿಗೆ ತಿಂಗಳಿಗೆ 500 ರೂ. ಗಳ ಸಹಾಯಧನ ರಾಜ್ಯದಲ್ಲಿ ಗೃಹಿಣಿ ಶಕ್ತಿ ಯೋಜನೆ ಶೀಘ್ರದಲ್ಲೇ ಜಾರಿ, ಅಸಿಡ್ ದಾಳಿ ಸಂತ್ರಸ್ಥರಿಗೆ ಮಾಸಾಶನ 10,000ಕ್ಕೆ ಏರಿಕೆ

ಯಾವ್ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ ಹಂಚಿಕೆ?

ಶಿಕ್ಷಣ ಇಲಾಖೆ: 37960 ಕೋಟಿ

ಜಲಸಂಪನ್ಮೂಲ ಇಲಾಖೆ: 22854 ಕೋಟಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ: 20494 ಕೋಟಿ

ನಗರಾಭಿವೃದ್ಧಿ ಇಲಾಖೆ: 17938 ಕೋಟಿ

ಕಂದಾಯ ಇಲಾಖೆ: 15943 ಕೋಟಿ

ಆರೋಗ್ಯ ಇಲಾಖೆ: 15151 ಕೋಟಿ

ಒಳಾಡಳಿತ ಮತ್ತು ಸಾರಿಗೆ ಇಲಾಖೆ: 14509 ಕೋಟಿ

ಇಂಧನ ಇಲಾಖೆ: 13803 ಕೋಟ

ಸಮಾಜ ಕಲ್ಯಾಣ ಇಲಾಖೆ: 11163 ಕೋಟಿ

ಲೋಕೋಪಯೋಗಿ ಇಲಾಖೆ: 10741 ಕೋಟಿ

ಕೃಷಿ ಮತ್ತು ತೋಟಗಾರಿಕೆ ಇಲಾಖೆ: 9456 ಕೋಟಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ: 5676 ಕೋಟಿ

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ: 4600 ಕೋಟಿ

ವಸತಿ ಇಲಾಖೆ: 3787 ಕೋಟಿ

ಇತರೆ 116968

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!