ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡಿರುವ ಸಾಧನೆಗಳನ್ನು ಜನರ ಮುಂದಿಟ್ಟು ಮತಯಾಚಿಸಿ ಎಂದು ಅಬಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಕಾರ್ಯಕರ್ತರಿಗೆ ಕರೆ ನೀಡಿದರು.
ಮಂಡ್ಯದ ಎಸ್.ಬಿ. ಸಮುದಾಯ ಭವನ ದಲ್ಲಿ ನಡೆದ ದಕ್ಷಿಣ ಪದವೀಧರ ಕ್ಷೇತ್ರದ ಅಭ್ಯರ್ಥಿ ಮೈ.ವಿ. ರವಿಶಂಕರ್ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಕೃಷಿ ಸಮ್ಮಾನ್ ಯೋಜನೆಯಡಿ ಮಂಡ್ಯ ಜಿಲ್ಲೆಯ ಸುಮಾರು 2.60 ಲಕ್ಷ ಕುಟುಂಬಗಳ ಖಾತೆಗೆ 10 ಸಾವಿರ ರೂ.ಗಳನ್ನು ಜಮಾ ಮಾಡಲಾಗುತ್ತಿದೆ. ಮಂಡ್ಯ ತಾಲೂಕೊಂದರಲ್ಲೇ ಸುಮಾರು 35 ಸಾವಿರ ಕ್ಕಿಂತಲೂ ಹೆಚ್ಚು ಮಂದಿ ರೈತರು ಯೋಜನೆಯ ಲಾಭ ಪಡೆಯುತ್ತಿದ್ದಾರೆ ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪ್ರಿಯ ಯೋಜನೆಗಳನ್ನು ಮುಂದಿಟ್ಟು ಕೊಂಡು ನಮ್ಮ ಪಕ್ಷದ ಕಾರ‍್ಯಕರ್ತರು ಮನೆ ಮನೆಗೆ ತೆರಳಿ ಮನವರಿಕೆ ಮಾಡಿ ಕೊಡುವ ಮೂಲಕ ಮತ ಪಡೆಯುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಕೊಟ್ಟ ಮಾತಿನಂತೆ ನಡೆ
ಈ ಭಾಗದ ರೈತರ ಜೀವನಾಡಿಯಾಗಿರುವ ಮೈಷುಗರ್ ಕಾರ್ಖಾನೆಯನ್ನು ಪ್ರಾರಂಭಿಸಲು ಮಾತು ಕೊಟ್ಟಿದ್ದು, ಮಾತು ಕೊಟ್ಟಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಖಾನೆಗೆ ಹಣ ಬಿಡುಗಡೆ ಮಾಡಿದ್ದಾರೆ. ಈಗಾಗಲೇ ದುರಸ್ತಿ ಕಾರ‍್ಯ ಆರಂಭವಾಗಿದೆ. ನಿಗಧಿತ ಅವಧಿಗಿಂತ ಸ್ವಲ್ಪ ತಡವಾಗಿಯಾದರೂ ನಾವು ಕಾರ್ಖಾನೆ ಪ್ರಾರಂಭ ಮಾಡುತ್ತೇವೆ. ಆ ಮೂಲಕ ಕೊಟ್ಟ ಮಾತು ಉಳಿಸಿಕೊಳ್ಳು ತ್ತೇವೆ ಎಂದು ಸ್ಪಷ್ಟಪಡಿಸಿದರು.
ಚುನಾವಣೆ ಮುಗಿದ ಬಳಿಕ ಅಕ್ಕಿ ಗಿರಣಿ ಮಾಲೀಕರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾರ‍್ಯೋನ್ಮುಖರಾಗು ವುದಾಗಿ ಭರವಸೆ ನೀಡಿ ದರಲ್ಲದೆ, ಈ ಹಿಂದೆ ಬೆಂಗಳೂರಿನಲ್ಲಿ ದಿನವಿಡೀ ಅಕ್ಕಿ ಗಿರಣಿ ಮಾಲೀಕರ ಸಭೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.
ಕೆ.ಆರ್.ಪೇಟೆ ಮಾದರಿಯಾಗಲಿ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಸಿ.ನಾರಾಯಣಗೌಡ ಮಾತ ನಾಡಿ, ಜೆಡಿಎಸ್ ಭದ್ರಕೋಟೆ ಯಂತಿರುವ ಜಿಲ್ಲೆಯಲ್ಲಿ ಎಲ್ಲ ಪಕ್ಷವನ್ನೂ ಚೂರು ಚೂರು ಮಾಡಿ ಬಿಜೆಪಿ ಭದ್ರಕೋಟೆ ಯನ್ನಾಗಿ ಮಾಡುವ ಕೆಲಸ ಎಲ್ಲರ ಮೇಲಿದೆ ಎಂದರು.
ಮೈ.ವಿ. ರವಿಶಂಕರ್ ಅವ ರನ್ನು ಹೆಚ್ಚಿನ ಪ್ರಾಶಸ್ತ್ಯ ಮತಗಳಿಂದ ಗೆಲ್ಲಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಕಾರ‍್ಯಕರ್ತರೂ ಕೆ.ಆರ್.ಪೇಟೆ ಉಪ ಚುನಾವಣೆ ಮಾದರಿಯಲ್ಲಿ ಪ್ರತಿ ಮನೆ ಮನೆಗೆ ಭೇಟಿ ನೀಡಿ ಮತದಾರರ ಮನವೊಲಿಸುವ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಸಿ.ಪಿ. ಉಮೇಶ್ ಅವರಿಗೆ ಹಣ ಕಾಸಿನ ಕೊರತೆ ಇಲ್ಲ. ಅವರು ಪಕ್ಷ ಕಟ್ಟಲು ಸಮರ್ಥ ವ್ಯಕ್ತಿಯಾಗಿ ಉಪಯೋಗಿಸಿಕೊಂಡಲ್ಲಿ ಪಕ್ಷವನ್ನು ಜಿಲ್ಲೆಯಲ್ಲಿ ಸದೃಢವಾಗಿ ಕಟ್ಟಲಿದ್ದಾರೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ. ಉಮೇಶ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ರಾಜ್ಯ ಪ್ರಧಾನ ಕಾರ‍್ಯದರ್ಶಿ ಸಿದ್ದರಾಜು, ರಾಜ್ಯ ಕಾರ‍್ಯಕಾರಿಣಿ ಸದಸ್ಯ ಡಾ. ಸಿದ್ದರಾಮಯ್ಯ, ಮನ್‌ಮುಲ್ ನಿರ್ದೇಶಕ ಎಸ್.ಪಿ. ಸ್ವಾಮಿ, ಮುಖಂಡರಾದ ಬಿ.ವಿವೇಕ್, ಪ.ನಾ. ಸುರೇಶ್, ಚಂದ ಗಾಲು ಶಿವಣ್ಣ, ನಾಗಣ್ಣ ಗೌಡ, ಅಶೋಕ್ ಜಯರಾಂ ಸೇರಿದಂತೆ ಹಲವರು ಕಾರ‍್ಯ ಕ್ರಮದಲ್ಲಿ ಭಾಗವಹಿಸಿದ್ದರು.