ರೈತರ ಸಮಸ್ಯೆಗಳಿಗೆ ಬಿಜೆಪಿ ಸರ್ಕಾರದಲ್ಲಿ ಯಾವುದೇ ಬೆಲೆ ಇಲ್ಲ. ಅವರಿಗೆ ಭ್ರಷ್ಟಚಾರ ಮಾಡುವುದೇ ಕಾಯಕ ಎಂದು ಮಾಜಿ ಸಚಿವ ಚಲುವರಾಯ ಸ್ವಾಮಿ ಟೀಕಿಸಿದರು.
ಮಂಡ್ಯದ ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷ ದೇಶದ ಅಭಿವೃದ್ಧಿಮಾಡಿದೆ.ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಸಮಸ್ಯೆಗಳನ್ನು ಎದುರಿಸಿಕೊಂಡು ಬಂದಿದೆ.
ಇಂದು ಕೇಂದ್ರ ಮತ್ತು ರಾಜ್ಯ ರಾಜಕಾರಣದಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ನೀವು ನೋಡಿದ್ದೀರಿ.
ಪ್ರತಿದಿನ ಕೋಮುಗಲಭೆ ನಡೆಯುತ್ತಿದೆ. ದೇಶದಲ್ಲಿ ಯಾವಾಗ ಏನು ನಡೆಯುತ್ತದೆ ಎಂದು ಜನರು ಆತಂಕದಿಂದಲೇ ಬದುಕುವಂತಾಗಿದೆ.
ಮುಂದಿನ ದಿನದಲ್ಲಿ ಬಿಜೆಪಿ ಸರ್ಕಾರಕ್ಕೆ ಬುದ್ಧಿ ಕಲಿಸಲು ನೀವೇ ಮುಂದಾಗಬೇಕು ಎಂದು ಹೇಳಿದರು.
ಕೋವಿಡ್ ಸಂದರ್ಭದಲ್ಲಿ ಎಷ್ಟರ ಮಟ್ಟಿಗೆ ಜನರಿಗೆ ಕಷ್ಟ ಕೊಟ್ಟಿದ್ದಾರೆ, ಜನರನ್ನು ಹೇಗೆ ನಡೆಸಿಕೊಂಡಿದ್ದಾರೆ ಎಂದು ದೇಶದ ಜನತೆಗೆ ತಿಳಿದಿದೆ. ಮುಂದಿನ ದಿನಗಳಲ್ಲಿ ಇಂತಹ ಪರಿಸ್ಥಿತಿ ಮರುಕಳಿಸದಂತೆ ಜನರು ಎಚ್ಚರ ವಹಿಸಬೇಕಿದೆ ಎಂದರು.
ರಾಜ್ಯದ ಜನತೆಗೆ ಕಾಡುತ್ತಿರುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಬಿಜೆಪಿ ಸರ್ಕಾರಕ್ಕೆ ಆಗಿಲ್ಲ. ಕಾಂಗ್ರೆಸ್ ಪಕ್ಷ ಹೋರಾಟ ಮಾಡಿ ನೀರು ತರಲು ಹೊರಟರೆ ಅದಕ್ಕೂ ಅವಕಾಶ ನೀಡಲು ನಿರಾಕರಿಸಿದ್ದರು.
ಆದರೂ ಕಾಂಗ್ರೆಸ್ ಕುಡಿಯುವ ನೀರಿಗಾಗಿ ದೊಡ್ಡಮಟ್ಟದಲ್ಲಿ ಹೋರಾಟವನ್ನು ಮಾಡಿದೆ. ರೈತರ ಹಿತಕ್ಕಾಗಿ ನಿಂತಿರುವ ಪಕ್ಷ ನಮ್ಮದಾಗಿದೆ ಎಂದರು.
ಇದನ್ನೂ ಓದಿ :ಡಾ.ಬಿ.ಆರ್. ಅಂಬೇಡ್ಕರ್ ಹಾಕಿಕೊಟ್ಟ ಮಾರ್ಗದಲ್ಲಿ ನಡೆಯೋಣ :