Thursday, September 19, 2024

ಪ್ರಾಯೋಗಿಕ ಆವೃತ್ತಿ

ಮುಡಾ ಹೆಸರಿನಲ್ಲಿ ಬಿಜೆಪಿ-ಜೆಡಿಎಸ್ ಕ್ಷುಲ್ಲಕ ರಾಜಕಾರಣ: ಶಿವನಂಜು

ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ವಿಚಾರದಲ್ಲಿ ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡ ಶಿವನಂಜು ದೂರಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ಮತ್ತು ಜೆಡಿಎಸ್ ಮುಖಂಡರು ಮುಡಾ ಹಗರಣವನ್ನು ಮುಂದಿಟ್ಟುಕೊಂಡು ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದು, ರಾಜ್ಯದ ಅಭಿವೃದ್ದಿಯ ಬಗ್ಗೆ ವಿಧಾನ ಮಂಡಲದಲ್ಲಿ ಚರ್ಚೆ ನಡೆಸದೇ ಇಡಿ ವಿಧಾನ ಮಂಡಲದ ಕಲಾಪವನ್ನು ಬಲಿ ಪಡೆದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಹಗರಣವನ್ನು ತನಿಖೆ ನಡೆಸಲು ಮುಖ್ಯಮಂತ್ರಿಗಳು ನಿರ್ಧಾರ ಮಾಡಿದ್ದಾರೆ. ಮೈಸೂರಿನ ಮುಡಾದಲ್ಲಿ 50 :50ರ ಅನುಪಾತದಲ್ಲಿ 14 ನಿವೇಶನಗಳನ್ನು ಹಂಚಿಕೆ ಮಾಡಿರುವುದು ಕಾನೂನು ಬದ್ಧವಾಗಿದೆ ಎಂದು ತಿಳಿಸಿದರು.

ಸೂಕ್ತ ದಾಖಲೆಯನ್ನು ನೀಡಿದರೂ ಸಹ ಮುಖ್ಯಮಂತ್ರಿಗಳ ಮೇಲೆ ಆರೋಪ ಹೊರಿಸಿ ಅವರ ರಾಜಿನಾಮೆಗೆ ಒತ್ತಾಯಿಸುವುದು ಸರಿಯಲ್ಲ. ಹೆಚ್.ಡಿ ಕುಮಾರಸ್ವಾಮಿ, ಬಿಎಸ್ ಯಡಿಯೂರಪ್ಪ ಅವರ ಕಾಲದಲ್ಲಿಯೂ ಅಕ್ರಮಗಳು ನಡೆದಿದೆ. ಆದರೆ ಈ ಅಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕರು ಚಕಾರ ಎತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಆರೋಪ ಹೊರಿಸುತ್ತಿರುವುದು ಸರಿಯಲ್ಲ ಎಂದರು.

ಪ್ರಸ್ತುತ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಹಗರಣದ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ನಂತರ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ, ಆದರೆ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿ ಸಿದ್ದರಾಮಯ್ಯ ಅವರಿಗೆ ಕೆಟ್ಟ ಹೆಸರು ತರಲು ಹೊರಟಿರುವುದು ಸಮಂಜಸವಲ್ಲ ಎಂದರು.

ಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಸೋಮಶೇಖರ್, ಶಿವಣ್ಣ, ಕೀಲಾರ ಕೃಷ್ಣ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!