Friday, June 21, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಬಿಜೆಪಿ- ಜೆಡಿಎಸ್ ಮಹಿಳಾ ಕಾರ್ಯಕರ್ತರಿಂದ ಪ್ರತಿಭಟನೆ

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಯನ್ನು ತಿರುಚಿ ಅಪಮಾನ ಮಾಡಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ – ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಮಂಡ್ಯದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಮಂಡ್ಯನಗರದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಉಭಯ ಪಕ್ಷದ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ, ಕಾಂಗ್ರೆಸ್ ಸರ್ಕಾರ ಹಾಗೂ ನಾಯಕರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ಕುಮಾರಸ್ವಾಮಿ ಅವರ ಹೇಳಿಕೆಯನ್ನು ತಿರುಚಿ ಮಹಿಳೆಯರ ಬಗ್ಗೆ ಅವಹೇಳನ ಮಾಡಿದ್ದಾರೆಂದು ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ ತೇಜೋವಧೆಗೆ ಮುಂದಾಗಿರುವುದು ಸರಿಯಲ್ಲ, ರಾಜಕೀಯ ದುರುದ್ದೇಶದಿಂದ ಕುಮಾರಸ್ವಾಮಿ ವಿರುದ್ಧ ಮಹಿಳೆಯರನ್ನು ಎತ್ತಿ ಕಟ್ಟುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ, ಕುಮಾರಸ್ವಾಮಿ ಮಹಿಳೆಯರನ್ನು ನಿಂದಿಸಿಲ್ಲ,ಕಾಂಗ್ರೆಸ್ ಪಕ್ಷ ವಾಸ್ತವ ಸ್ಥಿತಿ ತಿರುಚುವ ಮೂಲಕ ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗುತ್ತಿದೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಇಂತಹ ನೀಚ ಕೃತದ ಬಗ್ಗೆ ಮಹಿಳೆಯರು ಎಚ್ಚರದಿಂದಿರಬೇಕು ಎಂದು ಹೇಳಿದರು.
ಮಾಜಿ ಶಾಸಕ ಕೆ. ಟಿ ಶ್ರೀಕಂಠೇಗೌಡ,ಅಂಬುಜಮ್ಮ,ನಾಗಮ್ಮ ನೇತೃತ್ವ ವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!