Saturday, May 18, 2024

ಪ್ರಾಯೋಗಿಕ ಆವೃತ್ತಿ

ಬಿಜೆಪಿ ಸೇರ್ಪಡೆಯಾದ ಕಾಂಗ್ರೆಸ್-ಜೆಡಿಎಸ್ ಮುಖಂಡರು

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ಸಚ್ಚಿದಾನಂದ ಅವರ ನಾಯಕತ್ವ ಮೆಚ್ಚಿ ಕೊತ್ತತ್ತಿ ಹೋಬಳಿ ವ್ಯಾಪ್ತಿಯ ಕಾಂಗ್ರೆಸ್-ಜೆಡಿಎಸ್ ಪಕ್ಷದ ಹಲವು ಮುಖಂಡರು ಬಿಜೆಪಿ ಸೇರ್ಪಡೆಯಾದರು.

ಮಂಡ್ಯ ತಾಲ್ಲೂಕಿನ ಬೇವಿನಹಳ್ಳಿಯಲ್ಲಿ ಇಂದು ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅಬಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹಾಗೂ ರೇಷ್ಮೆ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರ ಸಮ್ಮುಖದಲ್ಲಿ ಹಲವು ಮುಖಂಡರು ಬಿಜೆಪಿ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕೆ.ಗೋಪಾಲಯ್ಯ, ಈ ಬಾರಿ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಯುವ ನಾಯಕ ಸಚ್ಚಿದಾನಂದ ನೇತೃತ್ವದಲ್ಲಿ ಬಿಜೆಪಿ ಪಕ್ಷ ಜಯ ಸಾಧಿಸುವ ವಿಶ್ವಾಸವಿದೆ. ಇಂದು ಕೊತ್ತತ್ತಿ ಹೋಬಳಿ ವ್ಯಾಪ್ತಿಯ ಹಲವು ಮುಖಂಡರು ಪಕ್ಷ ಸೇರಿರುವುದು ಬಲ ತಂದಿದೆ ಎಂದರು.

ಸಚಿವರಾದ ಗೋಪಾಲಯ್ಯ, ನಾರಾಯಣಗೌಡ, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಮುಖಂಡರಿಗೆ ಬಿಜೆಪಿ ಶಾಲು ಹೊದಿಸಿ ಪಕ್ಷಕ್ಕೆ ಸ್ವಾಗತಿಸಿದರು. ಬಿಜೆಪಿ ಮುಖಂಡರಾದ ಸಚ್ಚಿದಾನಂದ, ಡಾ.ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!