Friday, October 18, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜಿಲ್ಲೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ; ನವೀನ್ ಕುಮಾರ್

ರಾಜ್ಯಾದ್ಯಂತ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು, ಅದರಂತೆ ವಿಕಸಿತ ಭಾರತ ಸೃಷ್ಠಿಸುವ ನಿಟ್ಟಿನಲ್ಲಿ  ಸದಸ್ಯತ್ವ ಅಭಿಯಾನವನ್ನು ಮಂಡ್ಯ ಜಿಲ್ಲೆಯಲ್ಲಿಯೂ ಹಮ್ಮಿಕೊಳ್ಳಲಾಗಿದೆ ಎಂದಿ ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್‌ಕುಮಾರ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 15 ಹಾಲು ಒಕ್ಕೂಟಗಳಿದ್ದು, 26.89 ಲಕ್ಷ ಹಾಲು ಉತ್ಪಾದಕರಿದ್ದು, 50 ಲಕ್ಷ ಹಾಲು ಉತ್ಪಾದನೆಯಾಗುತ್ತಿದ್ದು, 70 ಉಪ ಉತ್ಪನ್ನಗಳನ್ನು ಮಾಡುತ್ತಿದ್ದು, ಒಕ್ಕೂಟಗಳು ಹಾಲು ಉತ್ಪಾದಕರಿಗೆ ಲೀಟರ್‌ಗೆ ನೀಡುವ ಹಣದಲ್ಲಿ 1 ರಿಂದ 2 ರೂ ಕಡಿತಗೊಳಿಸುತ್ತಿದ್ದು, ರಾಜಕೀಯ ಪ್ರೇರಿತ ಆಡಳಿತ ಮಂಡಳಿ, ಸ್ಪರ್ಧಾತ್ಮಕ ಮನೋಭಾವ ಇಲ್ಲದಿರುವುದು, ಮಾರುಕಟ್ಟೆಯಲ್ಲಿ ಅಸ್ಥಿತ್ವ ಉಳಿಸಕೊಳ್ಳುವಲ್ಲಿ ಪ್ರಯತ್ನ ನಡೆಯದ ಕಾರಣ ಹಾಲು ಉತ್ಪಾದಕರಿಗೆ ಹೊರೆ ಹೇರಲಾಗುತ್ತಿದೆ ಎಂದರು.

2023ರಲ್ಲಿ ಕಾಂಗ್ರೆಸ್ ಸರ್ಕಾರ ತಮ್ಮ ಪ್ರಣಾಳಿಕೆಯಲ್ಲಿ 2 ರೂ ಪ್ರೋತ್ಸಾಹ ಧನ ನೀಡುವುದಾಗಿ ಭರವಸೆ ನೀಡಿ ಇಂದಿಗೂ ಭರವಸೆ  ಈಡೇರಿಸಿಲ್ಲ, 2024ರ ಮೇ ಮಾಹೆಯಿಂದ ರೈತರಿಗೆ ನೀಡಬೇಕಾದ 5 ರೂ ಪ್ರೋತ್ಸಾಹ ಹಣವನ್ನು ನೀಡಿಲ್ಲ, ಇಂದು ಒಂದು ಲೀಟರ್ ಹಾಲು ಉತ್ಪಾದನೆ ಮಾಡಲು 26 ರಿಂದ 28 ರೂ ಖರ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಕಾಳಜಿ ವಹಿಸದ ಸರ್ಕಾರದ ಕ್ರಮವನ್ನು ವಿರೋಧಿಸುತ್ತೇವೆ ಎಂದು ಹೇಳಿದರು.

ಬಿಜೆಪಿ ರೈತ ಮೋಚಾ ಜಿಲ್ಲಾಧ್ಯಕ್ಷ ಅಶೊಕ್ ಜಯರಾಂ ಮಾತನಾಡಿ, ಬಿಜೆಪಿ ಸದಸ್ಯತ್ವ ಅಭಿಯಾನ ಇಂದು ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ 50 ಮಂದಿ ಸಕ್ರಿಯ ಸದಸ್ಯರು ನೋಂದಣಿ ಮಾಡಿಸಿಕೊಂಡಿದ್ದರೆ, ಅಭಿಯಾನ ಒಂದು ವಾರದ ಕಾಲ ನಡೆಯಲಿದ್ದು, ಅಂತ್ಯದ ವೇಳೆಗೆ ಜಿಲ್ಲೆಯಿಂದ 2 ಲಕ್ಷ ಮಂದಿ ನೊಂದಣಿ ಮಾಡಿಸಿಕೊಳ್ಳುವ ನಿರೀಕ್ಷೆಯನ್ನು ಹೊಂದಲಾಗಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಉಪಾಧ್ಯಕ್ಷ ಮಹೇಂದ್ರ, ಪ್ರಧಾನ ಕಾರ್ಯದರ್ಶಿ ಜವರೇಗೌಡ, ಜಿಲ್ಲಾ ಕಾರ್ಯದರ್ಶಿ ವೈರಮುಡಿಗೌಡ, ಜೋಗಿಗೌಡ ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!