Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಸಚಿವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಲಂಚ ಆರೋಪದ ಹಿನ್ನೆಲೆಯಲ್ಲಿ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಬರೆದ ಪತ್ರದನ್ವಯ ಸಮಗ್ರ ತನಿಖೆ ಮುಗಿಯುವವರೆಗೆ ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ, ಬಿಜೆಪಿ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದರು.

ಮಂಡ್ಯ ನಗರದ ಸರ್ ಎಂ ವಿ ಪ್ರತಿಮೆ ಎದುರು ಬಿಜೆಇ ಕಾರ್ಯಕರ್ತರು ‘ಪೇಸಿಎಸ್’ ಪೋಸ್ಟರ್ ಹಿಡಿದು ಧರಣಿ ನಡೆಸಿ ನಡೆಸಿದರು.

ಸಚಿವರು, ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಮೂಲಕ ಪ್ರತಿಯೊಂದು ಸಹಾಯಕ ಕೃಷಿ ಅಧಿಕಾರಿಗಳಿಂದ ಲಂಚ ಸಂಗ್ರಹಿಸಲು ಸೂಚಿಸಿದ್ದಾರೆಂದು ಆರೋಪಿಸಿದ ಬಿಜೆಪಿ ಕಾರ್ಯಕರ್ತರು, ಈಗಾಗಲೆ ಪ್ರಕರಣ ಕುರಿತು ಸಿಐಡಿ ತನಿಖೆ ನಡೆಯುತ್ತಿರುವುದರಿಂದ, ಚಲುವರಾಯಸ್ವಾಮಿ ಆರೋಪ ಮುಕ್ತರಾಗುವವರೆಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ ಸಚಿವರಾಗಿದ್ದ ಕೆ.ಎಸ್‌.ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕಾರ ನೀಡಿದ್ದರು, ಆದ್ದರಿಂದ ಚಲುವರಾಯಸ್ವಾಮಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್, ಮುಖಂಡರಾದ ಚೇತನ್ ಗೌಡ, ಶ್ರೀಧರ್, ಶಿವಕುಮಾರ್ ಆರಾಧ್ಯ,ಸಿ.ಟಿ ಮಂಜುನಾಥ್, ವಿವೇಕ್ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!