Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ವಕ್ಫ್‌ ಬೋರ್ಡ್‌ಗೆ ಕುಮ್ಮಕ್ಕು ಆರೋಪ ; ಬಿಜೆಪಿ ಪ್ರತಿಭಟನೆ

ರೈತರ ಜಮೀನು ಕಬಳಿಕೆಗೆ ವಕ್ಫ್‌ ಬೋರ್ಡ್‌ಗೆ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟಿಸಿದರು.

ಮಂಡ್ಯ ನಗರದ ಸರ್ ಎಂ ವಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಪಕ್ಷದ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ, ಜಮೀರ್ ಅಹಮದ್ ಖಾನ್ ವಿರುದ್ಧ ದಿಕ್ಕಾರದ ಘೋಷಣೆ ಕೂಗಿದರು.

ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ ಪ್ರತಿಭಟನಾಕಾರರು ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ಸರ್ಕಾರ ಕೆಲಸ ಮಾಡುತ್ತಿದೆ.  ಸರ್ಕಾರ ರೈತರ ಜಮೀನುಗಳನ್ನು ಕಬಳಿಸುವ ಷಡ್ಯಂತ್ರ ಮಾಡುತ್ತಿದೆ. ಇದಕ್ಕೆ ಸಚಿವ ಜಮೀರ್‌ ಅಹಮ್ಮದ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳಗೊಳಗೆ ಕುಮ್ಮಕ್ಕು ನೀಡುತ್ತಿದ್ದಾರೆ
ರಾಜ್ಯಾದ್ಯಂತ ವಕ್ಫ್ ಬೋರ್ಡ್ ಕಂದಾಯ ಇಲಾಖೆಯ ನಿಯಮ ಮೀರಿ ಕಂಡ ಕಂಡ ಜಾಗಗಳು,ಆಸ್ತಿಗಳು ತಮ್ಮವೆಂದು ಅಕ್ರಮವಾಗಿ ಮಾಡಿಕೊಳ್ಳಲು ಮುಂದಾಗಿದೆ. ಸರ್ಕಾರ ಮುಸ್ಲಿಮರ ಓಲೈಕೆ ಮಾಡಲು ಮೌನ ವಹಿಸಿದೆ. ಸರ್ಕಾರಕ್ಕೆ ರೈತರು, ಜನರ ಹಿತಕ್ಕಿಂತ ತುಷ್ಠೀಕರಣ ರಾಜಕಾರಣ ಮುಖ್ಯವಾಗಿದೆ ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಏನ್ ಡಿ ಎ ಸರ್ಕಾರ ದೇಶದ ಜನರ ಹಿತದೃಷ್ಟಿಯಿಂದ ವಕ್ಫ್‌ ಮಂಡಳಿಯಲ್ಲಿ ಅಕ್ರಮ ತಡೆಗಾಗಿ ವಕ್ಫ್  ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕವನ್ನು ಮಂಡಿಸಿದೆ,  ಸದರಿ ಕಾಯ್ದೆ ಕುರಿತು ಜಂಟಿ ಪಾರ್ಲಿಮೆಂಟರಿ ಬೋರ್ಡ್ ಪರಿಶೀಲನೆ ನಡೆಸುತ್ತಿದೆ, ಕಾಯ್ದೆಗೆ ತಿದ್ದುಪಡಿ ಖಚಿತವಾಗುತ್ತಿದ್ದಂತೆ ರಾಜ್ಯದಲ್ಲಿ  ವಕ್ಫ್ ಬೋರ್ಡ್ ಸಾರ್ವಜನಿಕರ ಆಸ್ತಿ ಕಾಪಾಡಿಸುವ ಹುನ್ನಾರಕ್ಕೆ ಮುಂದಾಗಿದೆ.  ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸಚಿವ ಜಮೀರ್ ಅಹಮದ್ ನೇರವಾಗಿ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಪಕ್ಷದ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್, ಸಿದ್ದರಾಮಯ್ಯ, ವಿವೇಕ್, ಮಂಜುನಾಥ್, ಹಾಡ್ಯ ರಮೇಶ್ ರಾಜು ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ