ಮದ್ದೂರು: ಮನ್ಮುಲ್ ನಲ್ಲಿ ನಡೆದಿರುವ ಹಾಲಿನ ಪುಡಿ ಕಲಬೆರಕೆ ಪ್ರಕರಣದಲ್ಲಿ ಭಾಗಿಯಾಗಿರುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಬಿಜೆಪಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ತಾಲ್ಲೂಕಿನ ಗೆಜ್ಜಲಗೆರೆಯಲ್ಲಿರುವ ಮನ್ಮುಲ್ ಮುಂಭಾಗ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಮನ್ಮಲ್ ನಲ್ಲಿ ನೂರಾರು ಕೋಟಿ ಅವ್ಯವಹಾರ ನಡೆದಿದೆ. ಕಾಂಗ್ರೆಸ್ ಸರ್ಕಾರದ ಆಡಳಿತ ಅವಧಿಯಲ್ಲಿ ಈ ಹಗರಣ ನಡೆದಿದ್ದು ನಡೆದಿದ್ದು,ಇದರಲ್ಲಿ ಭಾಗಿಯಾದವರು ಕಾಂಗ್ರೆಸ್ ಪಕ್ಷದವರೇ ಆಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಮಾಜಿ ಸಚಿವ ಕೆ.ಸಿ. ನಾರಾಯಣ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್, ಮುಖಂಡರಾದ ಸಿದ್ದರಾಮಯ್ಯ, ಈ.ಸಿ. ನಿಂಗರಾಜುಗೌಡ ಅಶೋಕ್ ಜಯರಾಮ್,ಸಿ.ಟಿ.ಮಂಜುನಾಥ್ ಮತ್ತಿತರರಿದ್ದರು.




