Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ಪ್ರತಿಭಟನೆ

ಹಲವು ವೈಪಲ್ಯಗಳನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತತರು ಗುರುವಾರ ರಾಜ್ಯ ಸರ್ಕಾರದ ವಿರುದ್ದ ಮಂಡ್ಯನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಮಂಡ್ಯನಗರದ ಸಂಜಯ ವೃತ್ತದಲ್ಲಿ ಸೇರಿದ ಬಿಜೆಪಿ ಕಾರ‍್ಯಕರ್ತರು, ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ ಖರ್ಗೆ ಅವರೇ ಕಾರಣರಾಗಿದ್ದು, ಅವರ ರಾಜೀನಾಮೆ ಪಡೆಯಬೇಕೆಂದು ಆಗ್ರಹಿಸಿದರು.

ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಸರ್ಕಾರಿ ಪ್ರಾಯೋಜಿತ ಆತ್ಮಹತ್ಯೆಗಳು ಅಥವಾ ಸರ್ಕಾರದ ಕುಮ್ಮಕ್ಕಿನ ಆತ್ಮಹತ್ಯೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಸಚಿವರು, ಆಡಳಿತ ಪಕ್ಷದ ಶಾಸಕರ ಕುಮ್ಮಕ್ಕಿನಿಂದ ಹಿಂದೆಂದೂ ಇಂಥ ಸರಣಿ ಆತ್ಮಹತ್ಯೆ ಪ್ರಕಣಗಳನ್ನು ಕೇಳಿರಲಿಲ್ಲ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಆತ್ಮಹತ್ಯೆ ಭಾಗ್ಯವನ್ನು ದಯಪಾಲಿಸಿದೆ. ಭ್ರಷ್ಟಾಚಾರ ಬಯಲಾದ್ದರಿಂದ ವಾಲ್ಮೀಕಿ ನಿಗಮದ ಅಕೌಟೆಂಟ್ ಚಂದ್ರಶೇಖರ್ ಮೊದಲ ಆತ್ಮಹತ್ಯೆ ಮಾಡಿಕೊಂಡಿದ್ದು, ಬಿಜೆಪಿ ಹೋರಾಟದ ಫಲವಾಗಿ ಸಚಿವ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದರು ಎಂದು ಹೇಳಿದರು.

ಸಿದ್ದಲಿಂಗ ಸ್ವಾಮೀಜಿ, ಶಾಸಕ ಬಸವರಾಜ ಮತ್ತಿಮೂಡ, ಕಲಬುರ್ಗಿ ಬಿಜೆಪಿ ನಾಯಕ ಚಂದುಪಾಟೀಲ, ಮಣಿಕಂಠ ರಾಥೋಡ್ ಅವರ ಕೊಲೆಗೆ ಸಂಚು ರೂಪಿಸಿದ್ದಾಗಿ ಡೆತ್ ನೋಟ್ ತಿಳಿಸಿದೆ. ಸಿದ್ದಲಿಂಗಸ್ವಾಮಿಜಿ ಅವರ ಧ್ವನಿ ಅಡಗಿಸಲು ಮಹಾರಾಷ್ಟçದ ಸುಪಾರಿ ಕಿಲ್ಲರ್‌ಗಳನ್ನು ಬಳಸುವ ವಿಚಾರವೂ ಡೆತ್‌ನೋಟ್‌ನಲ್ಲಿದೆ. ಹಾಗಾಗಿ ಇದೊಂದು ಗಂಭೀರ ವಿಚಾರ. ಆದ್ದರಿಂದ ಇದನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಎನ್.ಎಸ್.ಇಂದ್ರೇಶ್, ಮುಖಂಡರಾದ ಡಾ. ಸಿದ್ದರಾಮಯ್ಯ, ಇಂಡುವಾಳು ಸಚ್ಚಿದಾನಂದ, ಅಶೋಕ್ ಜಯರಾಮ್, ಅಶೋಕ್‌ಕುಮಾರ್, ಶ್ರೀಧರ್, ವಿದ್ಯಾ ನಾಗೇಂದ್ರ, ವಿವೇಕ್, ನಾಗಾನಂದ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ