Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ಖಂಡಿಸಿ ಬಿಜೆಪಿ ರಸ್ತೆತಡೆ

ತಮಿಳುನಾಡು ಸರ್ಕಾರದ ಒತ್ತಡಕ್ಕೆ ಮಣಿದು ಕೆ.ಆರ್.ಎಸ್ ನಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ಪಕ್ಷದ ಕಾರ್ಯಕರ್ತರು ಮಂಡ್ಯನಗರದ ಸಂಜಯ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ಅಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದರು.

ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ತಕ್ಷಣ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅಣತಿಯಂತೆ ಸುಪ್ರೀಂ ಕೋರ್ಟ್ ಮತ್ತು ಕಾವೇರಿ ನದಿ ಪ್ರಾಧಿಕಾರ ಮೆಚ್ಚಿಸಲು ಕಾವೇರಿ ಕೊಳ್ಳದ ಜಲಾಶಯಗಳಿಂದ ನೀರು ಬಿಡುಗಡೆ ಮಾಡಿ ರಾಜ್ಯದ ರೈತರಿಗೆ ಅನ್ಯಾಯ ಮಾಡಿದೆ ಎಂದು ದೂರಿದರು.

nudikarnataka.com

ಕೆ ಆರ್ ಎಸ್ ನಲ್ಲಿ113 ಅಡಿ ಇದ್ದ ನೀರು ಇದೀಗ 105 ಅಡಿಗೆ ಕುಸಿದಿದೆ, ಒಂದು ವಾರದಲ್ಲಿ 10 ಟಿಎಂಸಿ ನೀರು ಹರಿದು ಹೋಗಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಅಭಾವ ಎದುರಾಗಲಿದೆ, ಸರ್ಕಾರ ರಾಜ್ಯದ ರೈತರಿಗೆ ದ್ರೋಹ ಮಾಡಿದೆ. ನೀರನ್ನು ಬಿಟ್ಟು ಇದೀಗ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಅಷ್ಟೇ ಅಲ್ಲದೆ ಸರ್ವಪಕ್ಷ ಸಭೆ ಕರೆದಿರುವುದು ಕಾಂಗ್ರೆಸ್ ಸರ್ಕಾರದ ಇಬ್ಬಂದಿತನವಾಗಿದೆ ಎಂದು ಕಿಡಿಕಾರಿದರು.

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೈತರು ನ್ಯಾಯಾಲಯಕ್ಕೆ ಹೋಗಿ ಎಂದು ಹೇಳಿರುವುದು ಖಂಡನೀಯ. ರೈತರೇ ಸುಪ್ರೀಂಕೋರ್ಟ್ ಗೆ ಹೋಗುವುದಾದರೆ ನೀವು ಸರ್ಕಾರದಲ್ಲಿ ಏಕೆ ಇದ್ದೀರಿ ಎಂದು ಪ್ರಶ್ನಿಸಿದರು. ಪ್ರತಿಭಟನೆಕಾರರು ರಸ್ತೆಯಲ್ಲಿ ಬೆಂಕಿ ಹಚ್ಚಿದ್ದನ್ನು ಪೊಲೀಸರು ನಂದಿಸಲು ಹೋದಾಗ ಇಬ್ಬರ ನಡೆವೆ ತಳ್ಳಾಟ ನೂಕಾಟ ನಡೆಯಿತು. ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

ಪ್ರತಿಭಟನೆ ನೇತೃತ್ವದಲ್ಲಿ ಸಂಸದೆ ಸುಮಲತಾ ಅಂಬರೀಶ್, ಬಿಜೆಪಿ ಮುಖಂಡರಾದ ಅಶ್ವಥ್ ನಾರಾಯಣ್ ಗೌಡ, ಪಿ.ಸಿ ಮೋಹನ್, ಕೆ.ಸಿ.ನಂಜುಂಡೇಗೌಡ, ಅಶೋಕ್ ಜಯರಾಮ್ ಹಾಗೂ ಕೆ ಎಸ್ ಸಚ್ಚಿದಾನಂದ ವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ