Friday, September 20, 2024

ಪ್ರಾಯೋಗಿಕ ಆವೃತ್ತಿ

ಪಾಕ್ ಪರ ಘೋಷಣೆ ಪ್ರಕರಣ| ಸುಳ್ಳು ಎಫ್ಎಸ್ಎಲ್ ವರದಿ ಹಂಚಿಕೊಂಡ ಬಿಜೆಪಿ

ಸಂವಾದ ಫೌಂಡೇಷನ್ ಎಂಬ ಖಾಸಗಿ ಸಂಸ್ಥೆ ಮಾಡಿಸಿರುವ ಪರೀಕ್ಷೆಯನ್ನು ಪೊಲೀಸ್ ಇಲಾಖೆ ಮಾಡಿಸಿರುವ ಅಧಿಕೃತ ಎಫ್ ಎಸ್ ಎಲ್ ವರದಿ ಎಂಬಂತೆ ಬಿಂಬಿಸಿ, ಅದರ ಪ್ರತಿಗಳನ್ನು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ.

ಇದನ್ನೇ ಅಧಿಕೃತ ಎಫ್ ಎಸ್ ಎಲ್ ವರದಿ ಎಂಬಂತೆ ಮಾಧ್ಯಮಗಳು ಸಹ ಬಿಂಬಿಸುತ್ತಿದ್ದು, ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವುದು ಸತ್ಯ ಎಂದು ಪ್ರತಿಪಾದಿಸುತ್ತಿವೆ.

ಭಾರತೀಯ ಜನತಾ ಪಕ್ಷದ ಎಕ್ಸ್ ಖಾತೆಯಲ್ಲಿ ಎಫ್ ಎಸ್ ಎಲ್ ವರದಿ ಎಂದು ಹೇಳಲಾದ ಒಂದು ಪುಟವನ್ನು ಪೋಸ್ಟ್ ಮಾಡಲಾಗಿದ್ದು, ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು ”ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ ಎಫ್‌ಎಸ್‌ಎಲ್ ವರದಿಯಲ್ಲಿ ಬಟಾ ಬಯಲಾಗಿದೆ ಎಂದು ಬರೆಯಲಾಗಿದೆ.

“>

ರಾಷ್ಟ್ರ ವಿರೋಧಿ ಧೋರಣೆಯ ಕಾಂಗ್ರೆಸ್ ಹಾಗೂ ಸುಳ್ಳು ಸುದ್ದಿ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಈಗಲಾದರೂ ತಮ್ಮ ದೇಶದ್ರೋಹದ ಕೃತ್ಯವನ್ನು ಒಪ್ಪಿಕೊಂಡು ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೋರಬೇಕು ಎಂದು ಪೋಸ್ಟ್‌ ಮಾಡಲಾಗಿದೆ.

ಫಣೀಂದ್ರ ಬಿ.ಎನ್.‌ ಎಂಬುವವರು ಸಹಿ ಮಾಡಿರುವ ಈ ವರದಿಯಲ್ಲಿ ನಾಸೀರ್‌ ಸಾಬ್‌ ಜಿಂದಾಬಾದ್‌ ಮತ್ತು ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆಗಳ ನಡುವೆ ಪಾಕಿಸ್ತಾನ್‌ ಜಿಂದಾಬಾದ್‌ ಎಂದೇ ಕೂಗಿರುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗಿದೆಯಾದರೂ, ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆಯನ್ನೇ ಕೂಗಲಾಗಿದೆ ಎಂದು ಹೇಳಿಲ್ಲ.

ಈ ವರದಿಯನ್ನು ʻಸಂವಾದ ಫೌಂಡೇಷನ್‌ʼ ಎಂಬ ಖಾಸಗಿ ಸಂಸ್ಥೆ ಮಾಡಿಸಿದ್ದು, ಇದನ್ನೇ ಒರಿಜಿನಲ್‌ ಎಫ್‌ ಎಸ್‌ ಎಲ್‌ ವರದಿ ಎಂದು ಬಿಂಬಿಸಲಾಗುತ್ತಿದೆ ಎಂದು ʻದಿ ಸೌತ್‌ ಫಸ್ಟ್‌ ಡಾಟ್‌ ಕಾಮ್‌ʼ ಸಂಪಾದಕಿ ಅನುಷಾ ರವಿ ಸೂದ್‌ ಎಕ್ಸ್‌ ನಲ್ಲಿ ಟ್ವೀಟ್‌ ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!