Tuesday, November 17, 2026

ಪ್ರಾಯೋಗಿಕ ಆವೃತ್ತಿ

ಬಿಜೆಪಿಯನ್ನು ದೇಶದಿಂದ ಬುಡ ಸಮೇತ ಕಿತ್ತೊಗೆಯಬೇಕು

 


  • ಭರವಸೆ ಈಡೇರಿಸುವಲ್ಲಿ ಬಿಜೆಪಿ ಸಂಪೂರ್ಣ ವಿಫಲ

  • ಭಾರತ್ ಜೋಡೋ ಪಾದಯಾತ್ರೆಯಲ್ಲಿ ಭಾಗವಹಿಸಲು ಕರೆ

ದೇಶದ ಜನರಿಗೆ ಬಿಜೆಪಿ ಹಲವಾರು ಪೊಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದೆ, ಆದರೆ, ಅಧಿಕಾರಕ್ಕೆ ಬರುವ ಮೊದಲು ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಬಿಜೆಪಿ ಸಂಪೂರ್ಣವಾಗಿ ವಿಫಲವಾಗಿದೆ. ಇಂತಹ ಭ್ರಷ್ಟ ಬಿಜೆಪಿಯನ್ನು ದೇಶದಿಂದ ಬುಡ ಸಮೇತ ಕಿತ್ತೊಗೆಯಬೇಕು, ಇದಕ್ಕಾಗಿ ಮಹಿಳೆಯರು ಸಂಘಟಿತರಾಗಬೇಕು ಎಂದು ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಡಾ.ಪುಷ್ಪ ಅಮರನಾಥ್  ಕರೆ ನೀಡಿದರು.

ಪಾಂಡವಪುರ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅ.3ರಂದು ಮಂಡ್ಯ ಜಿಲ್ಲೆಯಲ್ಲಿ ನಡೆಯುವ ರಾಹುಲ್ ಗಾಂಧಿ ಅವರ ಭಾರತ್ ಜೋಡೊ ಪಾದಯಾತ್ರೆಗೆ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ದೇಶದ ಐಕ್ಯತೆಗಾಗಿ ರಾಹುಲ್ ಗಾಂಧಿ ಅವರು ಪಾದಯಾತ್ರೆ ನಡೆಸುತ್ತಿದ್ದಾರೆ. ಪಾದಯಾತ್ರೆಯು ಅ.3ರಂದು ಮೈಸೂರಿನಿಂದ ಮಂಡ್ಯ ಗಡಿಭಾಗಕ್ಕೆ ಬಂದು ಸೇರಲಿದೆ. ಅ.4 ಮತ್ತು 5ರಂದು ಹಬ್ಬ ಇರುವ ಕಾರಣ ದಿನಗಳವರೆಗೆ ಪಾದಯಾತ್ರೆ ಇರುವುದಿಲ್ಲ. ಅ.6ರಿಂದ ರಾಹುಲ್‌ಗಾಂಧಿ ಅವರ ಪಾದಯಾತ್ರೆ ಮುಂದುವರಿಯಲಿದ್ದು, ಐತಿಹಾಸಿಕ ಪಾದಯಾತ್ರೆಯಲ್ಲಿ ಜಿಲ್ಲೆಯ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಭಾಗವಹಿಸಿ ಪಾದಯಾತ್ರೆ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೃಷ್ಣೇಗೌಡ, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್. ರಮೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಭರತ್ ಪಟೇಲ್, ಜಿಲ್ಲಾ ಮುಖಂಡೆ ಯಶೋಧಗೌಡ, ಪುರಸಭೆ ಸದಸ್ಯರಾದ ಜಯಲಕ್ಷಮ್ಮ, ಕೆ.ಉಮಾಶಂಕರ್, ತಾ.ಪಂ.ಮಾಜಿ ಸದಸ್ಯರಾದ ಎಚ್.ಸಿ.ಶೋಭಾ, ಎನ್.ಬಿ.ರಾಮೇಗೌಡ, ಟೌನ್ ಕಾಂಗ್ರೆಸ್ ಅಧ್ಯಕ್ಷೆ ಆಶಾಲತಾ ಲವಕುಮಾರ್, ಇತರರಿದ್ದರು.

ಇದೇ ವೇಳೆ ಪಾಂಡವಪುರ ಪಟ್ಟಣದ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಾದಯಾತ್ರೆಯ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ