Wednesday, November 18, 2026

ಪ್ರಾಯೋಗಿಕ ಆವೃತ್ತಿ

ಬಿಜೆಪಿ ಎಂದರೆ ಭ್ರಷ್ಟಾಚಾರ ಜನತಾ ಪಾರ್ಟಿ: ರಣದೀಪ್ ಸಿಂಗ್ ಸುರ್ಜೆವಾಲ

ಬಿಜೆಪಿ ಅಂದರೆ ಭ್ರಷ್ಟಾಚಾರ ಜನತಾ ಪಾರ್ಟಿ, ರಾಜ್ಯದಲ್ಲಿ ಇರುವುದು ಭ್ರಷ್ಟಾಚಾರದ ಸರ್ಕಾರ. ಪ್ರತಿಯೊಂದು ಕೆಲಸಕ್ಕೂ 40 ಪರ್ಸೆಂಟ್​ ಕಮಿಷನ್ ಕೇಳುತ್ತಾರೆ. ರಾಜ್ಯದ ಜನರ ಹಣವನ್ನೂ ಲೂಟಿ ಮಾಡುತ್ತಿದ್ದಾರೆ. ಕಮಿಷನ್ ನೀಡಲಾಗದೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಮಿಷನ್​ ಬಗ್ಗೆ ಪ್ರಧಾನಿ ಮೋದಿಗೆ ಕೆಂಪಣ್ಣ ದೂರು ನೀಡಿದ್ದಾರೆ. ಆದರೆ ಪ್ರಧಾನಿಗಳಿಂದ ಯಾವುದೇ ಉತ್ತರ ಸಿಕ್ಕಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

“>

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತನಾಡಿದ ಅವರು ಶಾಸಕ ಮಾಡಾಳ್‌ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಆಗಿದೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.

ಸಿಎಂ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ 

ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ರಾಜ್ಯ ಕಾಂಗ್ರೆಸ್ ನಾಯಕರು ಬೆಂಗಳೂರು ನಗರದ ರೇಸ್​ ಕೋರ್ಸ್ ರಸ್ತೆಯ ಕಾಂಗ್ರೆಸ್​​ ಭವನದ ಬಳಿ ಶನಿವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ವೇಳೆ ಪೋಸ್ಟರ್​, ಸೂಟ್​ಕೇಸ್, ಹಣವಿರುವ ಗುಟ್ಕಾ ಬ್ಯಾಗ್​, ನಕಲಿ ನೋಟ್​ ಪ್ರದರ್ಶಿಸಿ ಪ್ರತಿಭಟಿಸಿದರು. ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸುರ್ಜೆವಾಲ, ವಿಪಕ್ಷನಾಯಕ ಸಿದ್ದರಾಮಯ್ಯ, ಶಾಸಕ ರಾಮಲಿಂಗಾರೆಡ್ಡಿ, ಶಾಸಕ ದಿನೇಶ್​​ ಗುಂಡೂರಾವ್, ಕೆ.ಜೆ.ಜಾರ್ಚ್, ಕೃಷ್ಣ ಭೈರೇಗೌಡ ಹಾಗೂ ಸಲೀಂ ಅಹ್ಮದ್ ಭಾಗಿಯಾಗಿದ್ದಾರೆ.

ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಗೋಡೆಗಳ ಮೇಲೆ ಪೋಸ್ಟರ್​ ಅಂಟಿಸಿ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಂತರ ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಿದ್ದರು. ಬಿಜೆಪಿ ಶಾಸಕ ಮಾಡಾಳ್ ವಿರುದ್ಧ ಬಿಜೆಪಿಯ ರೋಲ್ ಕಾಲ್ “ಮಾಡೆಲ್” ವಿರೂಪಾಕ್ಷಪ್ಪ ಎಂಬ ಪೋಸ್ಟರ್​​ನ್ನು ರಾಮಲಿಂಗಾರೆಡ್ಡಿ ಅಂಟಿಸಿದ್ದಾರೆ.

ಹಾಗೇ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕ್ಷೇತ್ರ ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಪೇ ಎಂಎಲ್ ಅಭಿಯಾನ ಆರಂಭಿಸಿದ್ದಾರೆ.

ಎಲ್ಲ ಇಲಾಖೆಗಳಲ್ಲೂ ಲಂಚ

ಕರ್ನಾಟಕ ಜನರ ಆಸ್ತಿಯನ್ನು ಲೂಟಿ ಮಾಡುವ ಕೆಲಸ ನಡೆಯುತ್ತಿದೆ. ಎಲ್ಲ ಇಲಾಖೆಗಳಲ್ಲೂ ಲಂಚ, ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದರ ವಿರುದ್ಧ ಕಾಂಗ್ರೆಸ್ ನಿರಂತರವಾಗಿ ಹೋರಾಟ ಮಾಡುತ್ತಿದೆ. ಬಿಜೆಪಿಯ ಎಲ್ಲ ಶಾಸಕರು, ಸಚಿವರ ಮನೆಗಳಲ್ಲಿ ಶೋಧ ಮಾಡಿ, ಕೋಟ್ಯಂತರ ಹಣ ಖರ್ಚು ಮಾಡಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಕೃಷ್ಣ ಭೈರೇಗೌಡ ವಾಗ್ದಾಳಿ ಮಾಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ