ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಮೇಲೆ ಕಳಂಕ ಹೊರಿಸಲು ತನಿಖಾ ಸಂಸ್ಥೆಗಳನ್ನು ಬಿಜೆಪಿ ದುರುಪಯೋಗ ಪಡಿಸಿಕೊಂಡು ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಂಡ್ಯ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಹೊರಟ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಬಳಿ ಇರುಯ ಆದಾಯ ತೆರಿಗೆ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು.

ಸೋನಿಯಾ ಗಾಂಧಿ ಅವರು ಅನಾರೋಗ್ಯದಿಂದ ಪದೇ ಪದೇ ಆಸ್ಪತ್ರೆಗೆ ದಾಖಲಾಗುತ್ತಿದ್ದರೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಚಾರಣೆ ನೆಪದಲ್ಲಿ ಮಾನಸಿಕವಾಗಿ ಹಿಂಸೆ ನೀಡುತ್ತಿದೆ ಎಂದು ಆರೋಪಿಸಿದರು.
ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರವೀಂದ್ರ ಮಾತನಾಡಿ,
ಕೇಂದ್ರ ಸರ್ಕಾರ ಪ್ರಜಾ ಪ್ರಭುತ್ವದ ಮೌಲ್ಯಗಳನ್ನು ಗೌರವಿಸಿ ಇನ್ನು ಮುಂದೆ ಈ ರೀತಿಯ ದ್ವೇಷ ರಾಜಕಾರಣವನ್ನು ನಿಲ್ಲಿಸಬೇಕು.
ಬಿಜೆಪಿ ಸರ್ಕಾರ ಹತ್ತಾರು ವರ್ಷ ಹಳೆಯದಾದ ಪ್ರಕರಣಕ್ಕೆ ಜೀವ ಕೊಟ್ಟು ಸುಳ್ಳು ಆರೋಪಗಳನ್ನು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರ ಮೇಲೆ ಹೊರಿಸುವ ಮೂಲಕ ದ್ವೇಷ ರಾಜಕಾರಣ ಮಾಡುತ್ತಿದೆ.
ಇದರ ಹಿಂದೆ ಬಿಜೆಪಿ ವರಿಷ್ಠರ ಕುಮ್ಮಕ್ಕು ಇದೆ.ಕೂಡಲೇ ಕೇಂದ್ರ ಸರ್ಕಾರ ಇಂತಹ ದ್ವೇಷ ರಾಜಕಾರಣ ಕೈಬಿಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ವಾಸು,ರಮೇಶ್ ಬಾಬು ಬಂಡಿಸಿದ್ದೇಗೌಡ, ಎಂ.ಎಸ್. ಆತ್ಮಾನಂದ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮುಖಂಡರಾದ ಎಂ.ಎಸ್. ಚಿದಂಬರ್, ಗಣಿಗ ರವಿಕುಮಾರ್,ಹಾಲಹಳ್ಳಿ ರಾಮಲಿಂಗಯ್ಯ, ಸಿದ್ದರಾಮೇಗೌಡ, ಪೂರ್ಣಿಮಾ, ಪಲ್ಲವಿ, ಅಂಜನಾ ಶ್ರೀಕಾಂತ್, ಸುರೇಶ್ ಕಂಠಿ,ವಿಜಯ್ ಕುಮಾರ್, ಹೆಚ್.ತ್ಯಾಗರಾಜು,ನಗರಸಭಾ ಸದಸ್ಯ ನಯೀಮ್ ಸೇರಿದಂತೆ ಇತರರು ಹಾಜರಿದ್ದರು.




