Thursday, September 19, 2024

ಪ್ರಾಯೋಗಿಕ ಆವೃತ್ತಿ

ಜನಾಂದೋಲನ ಕಾರ್ಯಕ್ರಮದಲ್ಲಿ ಬಿಜೆಪಿಯ 21 ಹಗರಣ ಬಯಲು: ನರೇಂದ್ರಸ್ವಾಮಿ

ರಾಜ್ಯದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಸ್ವಷ್ಟ ಬಹುಮತವನ್ನು ನೀಡಿ ಅಧಿಕಾರ ಕೊಟ್ಟಿದ್ದರೂ ಕೂಡ ಸರ್ಕಾರವನ್ನು ಅಸ್ಥಿರ ಗೊಳಿಸುವ ಹುನ್ನಾರದಲ್ಲಿ ಬಿಜೆಪಿ ಜೆಡಿಎಸ್ ಪಕ್ಷದವರು ಪಾದಯಾತ್ರೆ ಹಮ್ಮಿಕೊಂಡಿದ್ದು, ಇದರ ವಿರುದ್ದವಾಗಿ ಕಾಂಗ್ರೆಸ್ ಪಕ್ಷವು ಜನಾಂದೋಲನ ಕಾರ್ಯಕ್ರಮ ರೂಪಿಸಿದ್ದು, ಬಿಜೆಪಿ ಸರ್ಕಾರದಲ್ಲಿ ನಡೆದ 21 ಹಗರಣಗಳನ್ನು ಜನರ ಮುಂದೆ ಬಯಲು ಮಾಡುತ್ತೇವೆ ಎಂದು ಮಾಜಿ ಸಚಿವ ಹಾಗೂ ಶಾಸಕ ಪಿ.ಎಂ ನರೇಂದ್ರಸ್ವಾಮಿ ಮನವಿ ಮಾಡಿದರು.

ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜನಾಂದೋಲನ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಪಾದಯಾತ್ರೆ ತಕ್ಕ ಉತ್ತರವನ್ನು ನೀಡಲು ಕಾಂಗ್ರೆಸ್ ಪಕ್ಷದ ವತಿಯಿಂದ ಮಂಡ್ಯ ಮತ್ತು ಮೈಸೂರಿನಲ್ಲಿ ಹಮ್ಮಿಕೊಂಡಿರುವ ಜನಾಂದೋಲನ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಬೇಕೆಂದು ಮನವಿ ಮಾಡಿದರು.

ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಅನುದಾನ ಕಡಿತಗೊಳಿಸಿರುವುದನ್ನು ವಿರೋಧಿಸಿ ಹಾಗೂ ಬಿಜೆಪಿ ಸರ್ಕಾರದಲ್ಲಿ ನಡೆದಿದೆ ಎನ್ನಲಾದ 21 ಹಗರಣಗಳ ವಿರುದ್ದವಾಗಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ಜನಾಂದೋಲನ ಕಾರ್ಯಕ್ರಮವು ಮಂಡ್ಯದಲ್ಲಿ ಆಗಸ್ಟ್ 6 ಹಾಗೂ ಮೈಸೂರಿನಲ್ಲಿ 9 ರಂದು ನಡೆಯಲಿದ್ದು, ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷಕ್ಕೆ ಬಲ ತುಂಬಬೇಕೆಂದು ಕೋರಿದರು.

ಕುಲಕ್ಷ ರಾಜಕಾರಣ ಮಾಡುತ್ತಿದ್ದಾರೆ

ರಾಜ್ಯದ ರಾಜ್ಯಪಾಲರ ಮುಖಾಂತರ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿಸಿದ್ದಾರೆ, ವಿಧಾನಸಭಾ ಅಧಿವೇಶನದಲ್ಲಿ ತಕ್ಕ ಉತ್ತರ ನೀಡಿದ್ದೇವೆ, ಬಿಜೆಪಿ ಪಕ್ಷದವರು ಜೆಡಿಎಸ್ ಪಕ್ಷದ ಮುಖಂಡರಾದ ಕುಮಾರಸ್ವಾಮಿಯವರನ್ನು ಮುಂದೆ ಬಿಟ್ಟುಕೊಂಡು ಕುಲಕ್ಷ ರಾಜಕಾರಣ ಮಾಡುತ್ತಿದ್ದಾರೆ ಇದು ಫಲ ಕೊಡುವುದಿಲ್ಲ ಎಂದು ಛೇಡಿಸಿದರು.

ಕಾಂಗ್ರೆಸ್‌ನಲ್ಲಿ ಬಲಿಷ್ಠವಾಗಿ ರಾಜ್ಯದ ನಾಯಕತ್ವ ಪಡೆದಿರುವ ನಾಯಕನನ್ನು ಅಸ್ಥಿರಗೊಳಿಸಿದರೇ ಇಡೀ ರಾಷ್ಟ್ರದಲ್ಲಿ ಕಾಂಗ್ರೆಸ್‌ನ ಬಲವನ್ನು ಕುಗ್ಗಿಸಬಹುದು ಎಂಬ ಹುನ್ನಾರದಿಂದ ಬಹುಮತ ಕಳೆದುಕೊಂಡ ಬಿಜೆಪಿ ಜೆಡಿಎಸ್ ಪಕ್ಷಗಳು ಯಾವುದೇ ಆರೋಪಗಳಿಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ದ ಸಂಬಂಧಪಡದ ವಿಷಯಗಳನ್ನು ಮುಂದಿಟ್ಟುಕೊಂಡು ಪಾದಯಾತ್ರೆಯನ್ನು ನಡೆಸುತ್ತಿವೆ ಎಂದು ದೂರಿದರು.

ನ್ಯಾಯಾಲಯದ ಮೇಲೆ ನಮಗೆ ನಂಬಿಕೆ ಇದೆ

ಮತ್ತೊಂದಡೆ ಕೇಂದ್ರದಲ್ಲಿ ಆಡಳಿತದಲ್ಲಿರುವ ನರೇಂದ್ರಮೋದಿ ನೇತೃತ್ವದ ಸರ್ಕಾರ, ರಾಜ್ಯದಲ್ಲಿರುವ ಸರ್ಕಾರವನ್ನು ರಾಜ್ಯಪಾಲರ ಮೂಲಕ ಅಸ್ಥಿರಗೊಳಿಸಲು ಹೊರಟ್ಟಿದ್ದಾರೆ, ಇದು ಸಾಧ್ಯವಿಲ್ಲ, ಪ್ರಶ್ನೆ ಮಾಡುವ ಹಕ್ಕು ನಮ್ಮಲ್ಲಿರುವುದರಿಂದ ನ್ಯಾಯಾಲಯದ ಮೇಲೆ ನಮಗೆ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಲು ಮಳವಳ್ಳಿ ತಾಲ್ಲೂಕಿನಾದ್ಯಂತ ಪ್ರತಿಯೊಂದು ಗ್ರಾಮದಲ್ಲಿಯೂ ಕಾಂಗ್ರೆಸ್ ಕಾರ್ಯಕರ್ತರು ಜನಾಂದೋಲನ ಕಾರ್ಯದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೋರಿದರು.

ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೊಡ್ಡಯ್ಯ, ಸಿ.ಪಿ ರಾಜು, ಮಂಡ್ಯ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಅಧ್ಯಕ್ಷ ಚಿಕ್ಕಲಿಂಗಯ್ಯ, ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಆರ್.ಎನ್ ವಿಶ್ವಾಸ್, ಕೆಪಿಸಿಸಿ ಸದಸ್ಯರಾದ ಚನ್ನಪಿಳ್ಳೇಕೊಪ್ಪಲು ಸಿದ್ದೇಗೌಡ, ಪುಟ್ಟಸ್ವಾಮಿ, ತಾ.ಪಂ ಮಾಜಿ ಉಪಾಧ್ಯಕ್ಷ ಮಾರ್ಕಾಲು ಮಾಧು, ಟಿಎಪಿಸಿಎಂಎಸ್ ಅಧ್ಯಕ್ಷ ಬಸವರಾಜು, ಮಾಜಿ ಅಧ್ಯಕ್ಷ ಕುಳ್ಳಚನ್ನಂಕಯ್ಯ, ಮುಖಂಡರಾದ ಅಂಬರೀಷ್, ದೇವರಾಜು, ಚಂಧ್ರಕುಮಾರ್, ಕುಂದೂರು ಕೆ.ಎಸ್ ಪ್ರಕಾಶ್, ಹುಸ್ಕೂರು ಕೃಷ್ಣಮೂರ್ತಿ ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!