Friday, November 20, 2026

ಪ್ರಾಯೋಗಿಕ ಆವೃತ್ತಿ

ನಾಲ್ಕು ಮತಗಳನ್ನು ಸೆಳೆಯಲು ಶಕ್ತಿ ಇಲ್ಲದ ಬಿ.ಎಲ್ ಸಂತೋಷ್ : ಕಾಂಗ್ರೆಸ್ ಲೇವಡಿ

ಬಿಜೆಪಿ ಪಕ್ಷಕ್ಕೆ ಸಭೆ ಕರೆಯಲು ಒಬ್ಬ ಅಧ್ಯಕ್ಷ ದಿಕ್ಕಿಲ್ಲ, ಬಿಜೆಪಿ ಶಾಸಕರ ಸಭೆ ನಡೆಸಲು ಒಬ್ಬ ಶಾಸಕಾಂಗ ಪಕ್ಷದ ನಾಯಕನಿಲ್ಲ. ಜನಪ್ರತಿನಿಧಿಯಾಗಲು ಅರ್ಹತೆ ಇಲ್ಲದ, ನಾಲ್ಕು ಮತಗಳನ್ನು ಸೆಳೆಯಲು ಶಕ್ತಿ ಇಲ್ಲದ ಬಿ ಎಲ್ ಸಂತೋಷ್ ಸಭೆ ನಡೆಸುವ ದುರ್ಗತಿ ಬಂದಿದೆ ಎಂದರೆ ಬಿಜೆಪಿ ಅದೆಷ್ಟು ರಾಜಕೀಯ ದಿವಾಳಿಯಾಗಿರಬಹುದು! ಎಂದು ಕಾಂಗ್ರೆಸ್ ಲೇವಡಿ ಮಾಡಿದೆ. 

“>

ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆಯುವುದಕ್ಕೆ ಮಾತ್ರ ಈ ಸಭೆ ಸೀಮಿತವಾಗಿದೆ. ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲು ಸಭೆ ನಡೆಸಬೇಕಿತ್ತು, ನೂತನ ರಾಜ್ಯಾಧ್ಯಕ್ಷರ ನೇಮಕಕ್ಕಾದರೂ ಸಭೆ ನಡೆಸಬೇಕಿತ್ತು. ಆದರೆ ಒಬ್ಬ ವ್ಯಕ್ತಿಯ ಪ್ರತಿಷ್ಠೆಯ ಹಪಹಪಿಯನ್ನು ಸಂತೈಸಲು ಸಭೆ ನಡೆಸಿದೆ! ಬಿಜೆಪಿಯ ಅಸಮದಾನಿತರು ಈ ಸಭೆಯಿಂದ ದೂರ ಉಳಿಯುವ ಮೂಲಕ ಬಿಜೆಪಿ v\s ಬಿಜೆಪಿ ಕಿತ್ತಾಟ ಮತ್ತೊಮ್ಮೆ ಬಹಿರಂಗವಾಗಿದೆ ಹಾಗೂ ಬಿ.ಎಲ್.ಸಂತೋಷ್ ಅವರಿಗೆ ಅವರಿಗೆ ನಯಾಪೈಸೆ ಕಿಮ್ಮತ್ತಿಲ್ಲ ಎಂಬುದು ಅನಾವರಣಗೊಂಡಿದೆ ಎಂದು ಕಾಂಗ್ರೆಸ್ ಪಕ್ಷವು ಸಾಮಾಜಿಕ ಮಾಧ್ಯಮ X ನಲ್ಲಿ ಪೋಸ್ಟ್ ಮಾಡಿದೆ.

ಇತ್ತೀಚ್ಚಿಗೆ ಬಿಜೆಪಿಯ ಶಾಸಕರು ಯಡಿಯೂರಪ್ಪನವರ ಮನೆಯಲ್ಲಿ ಸಭೆ ಸೇರಿ, ನೀವೇ ನಾಯಕತ್ವ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದರು. ಬಿಜೆಪಿ ಶಾಸಕರೆಲ್ಲ, ಯಡಿಯೂರಪ್ಪ ಅವರ ಹಿಂದೆ ಹೋಗಿದ್ದೇ ತಡ ಕುಪಿತರಾದ ಬಿ ಎಲ್ ಸಂತೋಷ್ ನಾನೇ ಲೀಡರ್ ಎಂಬ ಸಂದೇಶ ರವಾನಿಸಲು ಸಭೆ ನಡೆಸಿದ್ದಾರೆ! ಎಂದು ಕಾಂಗ್ರೆಸ್ ಜರಿದಿದೆ.

ಚುನಾವಣೆಯ ತಂತ್ರಗಾರಿಕೆ ಮಕಾಡೆ ಮಲಗಿ ಹೀನಾಯ ಸೋಲು ಅನುಭವಿಸಿದಾಗ ಇದೇ ಸಂತೋಷ್ ಗಂಟು ಮೂಟೆ ಕಟ್ಟಿಕೊಂಡು ನಾಪತ್ತೆಯಾಗಿದ್ದರು, ಈಗ BSY ಅವರಿಗೆ ಸೆಡ್ಡು ಹೊಡೆಯಲು ಮತ್ತೆ ಪ್ರತ್ಯಕ್ಷರಾಗಿ ಸಭೆ ನಡೆಸಿದ್ದಾರೆ. ಅದೇನೇ ಮಾಡಿದರೂ ಬಿಜೆಪಿಗೆ ಮತ್ತೆ ಜೀವ ಬರುವುದಿಲ್ಲ! ಎಂದು ವ್ಯಂಗ್ಯವಾಡಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ