ರಾಜ್ಯ ಸರ್ಕಾರವು ವಿವಿಧ ಜಿಲ್ಲೆಗಳ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಬಾಲ ನ್ಯಾಯ ಮಂಡಳಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ, ಸೆ.9ರಂದು ಆದೇಶ ಹೊರಡಿಸಿತ್ತು. ಆದರೆ ಈ ಅದೇಶವನ್ನು ತಡೆಹಿಡಿದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಾರ್ಯದರ್ಶಿ ಡಾ.ಶಮ್ಲಾ ಇಕ್ಷಾಲ್ ಅವರು ಸೆ.12ರಂದು ಆದೇಶ ಹೊರಡಿಸಿದ್ದಾರೆ.
ಸದರಿ ಅಧಿಸೂಚನೆ ಕುರಿತಂತೆ ಹಲವು ಗಂಭೀರ ಸ್ವರೂಪದ ದೂರುಗಳು ಸ್ವೀಕೃತವಾಗಿರುವುದರಿಂದ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಎರಡೂ ಅಧಿಸೂಚನೆಗಳ ಅನುಷ್ಠಾನಕ್ಕೆ ಮುಂದಿನ ಆದೇಶದವರೆವಿಗೂ ತಡೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಆಧ್ಯಕ್ಷರಾಗಿ ನೇಮಕವಾಗಿದ್ದ ವಕೀಲರಾದ ಎಸ್.ಬಿ. ಸುಮಿತ್ರ ತಿಮ್ಮೇಶ್ ಅವರ ನೇಮಕಕ್ಕೂ ತಡೆ ಬಿದ್ದಂತಾಗಿದೆ.