Thursday, September 19, 2024

ಪ್ರಾಯೋಗಿಕ ಆವೃತ್ತಿ

ರವೀಂದ್ರ ಶ್ರೀಕಂಠಯ್ಯ ಹುಟ್ಟುಹಬ್ಬ| ಕಾರಸವಾಡಿಯಲ್ಲಿ ರಕ್ತದಾನ ಶಿಬಿರ

ಮಂಡ್ಯ ತಾಲೂಕಿನ ಕಾರಸವಾಡಿ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಸಂತೆಕಸಲಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮತ್ತು ಕಾರಸವಾಡಿ ಯುವ ಮುಖಂಡರು ಆಯೋಜಿಸಿದ್ದ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರ 52ನೇ ವರ್ಷದ ಹುಟ್ಟುಹಬ್ಬ ಅಂಗವಾಗಿ ರಕ್ತನಿಧಿ ಕೇಂದ್ರದ ಸಹಕಾರದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೆಡಿಎಸ್ ಕಾರ್ಯಕರ್ತರು ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆದರು.

ಕಾರ್ಯಕ್ರಮದಲ್ಲಿ ಸಂತೆಕ ಸಲಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಶ್, ಉಪಾಧ್ಯಕ್ಷೆ ಕೆ.ಎಸ್. ಸೌಮ್ಯ ಸದಸ್ಯರಾದ ಬಸವರಾಜು, ರವಿ, ಸತೀಶ್, ಲೋಕೇಶ್, ಲಕ್ಷ್ಮಿ, ಮಮತಾ ಹಾಗೂ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಎಂ ಸಿ ಲಂಕೇಶ್ ಮಂಗಲ, ಜೆಡಿಎಸ್ ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ರಾಕೇಶ್, ಕಾವೇರಿ ನಿಗಮದ ನಿವೃತ್ತ ಅಧ್ಯಕ್ಷಕ ವೈ ಎನ್ ಹನುಮಂತಯ್ಯ, ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕೆ ರಾಜು ಹಾಗೂ ಜೆಡಿಎಸ್ ಕಾರ್ಯಕರ್ತ ಶಿವಮಲ್ಲು ಮತ್ತಿತರರು ಹಾಜರಿದ್ದರು.

ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಬೆಂಬಲಿಗ ಕಾರಸವಾಡಿ ಗ್ರಾಮ ಪಂಚಾಯಿತಿ ಸದಸ್ಯ ಬಸವರಾಜು ಮಾತನಾಡಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!