ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಎಂ.ಸಿ. ಲಂಕೇಶ್ ಅವರ ತಾಯಿ ಮಹದೇವಮ್ಮನವರ ಉತ್ತರ ಕ್ರಿಯಾದಿ ಭೂಶಾಂತಿ ಅಂಗವಾಗಿ ನೆಲದನಿ ಬಳಗ ಮಂಗಲ ಹಾಗೂ ಅಸೋಷಿಯೇಷನ್ ಆಫ್ ಅಲಯನ್ಸ್ ಕ್ಲಬ್ ಇಂಟರ್‌ನ್ಯಾಷನಲ್ ವತಿಯಿಂದ ಸಹಯೋಗದೊಂದಿಗೆ ಜ.13ರಂದು ಮಂಡ್ಯ ತಾಲ್ಲೂಕಿನ ಮಂಗಲ ಗ್ರಾಮದಲ್ಲಿ ಬೆಳಿಗ್ಗೆ 9 ಗಂಟೆಗೆ ರಕ್ತದಾನ ಶಿಬಿರ ಹಾಗೂ ಸಸಿ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವಂತೆ ನೆಲದನಿ ಬಳಗದ ಲಂಕೇಶ್ ಮಂಗಲ ಮನವಿ ಮಾಡಿದ್ದಾರೆ.




