Friday, November 20, 2026

ಪ್ರಾಯೋಗಿಕ ಆವೃತ್ತಿ

ಬಿಎಲ್‌ಎಸ್ ಇನ್ಸಿಟ್ಯೂಟ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

ಬಿಎಲ್.ಎಸ್ ಇನ್ಸಿಟ್ಯೂಟ್ ಆಫ್ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಸೈನ್ಸ್ ವತಿಯಿಂದ ದೀಪ ಬೆಳಗಿಸುವುದು ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ ಮಂಡ್ಯ ನಗರದ ಗಾಂಧೀಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಮಿಮ್ಸ್‌ನ ವೈದ್ಯಕೀಯ ಅಧೀಕ್ಷಕರಾದ ಡಾ.ಪಿ.ವಿ.ಶ್ರೀಧರ್ ರವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ನರ್ಸಿಂಗ್ ಎನ್ನುವಂತಹುದು ರೋಗಿಗಳ ನೋವನ್ನು ಮರೆಸುವಂತಹ ಇಲಾಖೆ ಈ ನರ್ಸಿಂಗ್ ಇಲಾಖೆ, ನರ್ಸಿಂಗ್ ವಿದ್ಯಾರ್ಥಿಗಳು ರೋಗಿಗಳಿಗೆ ಹೆಚ್ಚಿನ ಮಟ್ಟದ ಸೇವೆಯನ್ನು ಸಲ್ಲಿಸುವಂತೆ ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ನರ್ಸಿಂಗ್‌ ವಿದ್ಯಾರ್ಥಿಗಳು ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಡಾ.ಕೀರ್ತಿ, ಡಾ.ದೇವಿಕಾ, ಕಾರ್ತಿಕ್, ಚಂಪಕಾ, ಚಿರಂಜೀವಿ, ತಾರಾಶ್ರೀ, ನಂದಿನಿ, ಸೇರಿದಂತೆ ಇನ್ನಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ