Thursday, November 19, 2026

ಪ್ರಾಯೋಗಿಕ ಆವೃತ್ತಿ

ನಾಗಮಂಗಲ | ನಾಡಬಾಂಬ್ ಸ್ಪೋಟ ; ಇಬ್ಬರು ವಿದ್ಯಾರ್ಥಿಗಳು ಗಾಯ

ನಾಗಮಂಗಲ ತಾಲ್ಲೂಕಿನ ಕಂಬದಹಳ್ಳಿ ಬೆಟ್ಟದ ಬಳಿ ನಾಡ ಬಾಂಬ್ ಸ್ಪೋಟಗೊಂಡು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಭಾನುವಾರ ಬೆಳಿಗ್ಗೆ 7 ಗಂಟೆ ಸಮಯದಲ್ಲಿ ನಡೆದಿದೆ.

ಗ್ರಾಮದ ಜೈನಮಠದ ವಸತಿ ನಿಲಯದ ಹರಹಥ್ ಪಾಟೀಲ್ (15) ಹಾಗೂ ಸೌಧರ್ಮ (15) ಗಾಯಗೊಂಡ ವಿದ್ಯಾರ್ಥಿಗಳಾಗಿದ್ದಾರೆ.

ಸ್ವಚ್ಚತಾ ಕಾರ್ಯಕ್ಕಾಗಿ ಇಲ್ಲಿನ ಆಂಜನೇಯ ಬೆಟ್ಟಕ್ಕೆ ಬಂದಿದ್ದ 15 ವಿದ್ಯಾರ್ಥಿಗಳು ಸ್ವಚ್ಚತಾ ಕಾರ್ಯ  ಕೈಗೊಂಡಿದ್ಧಾಗ, ಈ ಇಬ್ಬರು ವಿದ್ಯಾರ್ಥಿಗಳಿಗೆ ನಾಡಬಾಂಬ್ ಸ್ಪೋಟಿಸಿದೆ. ಇದರಿಂದ ವಿದ್ಯಾರ್ಥಿಗಳ ಕೈ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರಾಣಿಗಳ ಬೇಟೆಗೆ ಇಟ್ಟಿದ್ದ ನಾಡಬಾಂಬ್ ಸ್ಪೋಟಿಸಿ ಈ ಅವಘಡ ನಡೆದಿದೆ ಎನ್ನಲಾಗಿದೆ. ನಾಗಮಂಗಲದ ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ