Sunday, November 22, 2026

ಪ್ರಾಯೋಗಿಕ ಆವೃತ್ತಿ

ದೆಹಲಿಯಲ್ಲಿ ಬಾಂಬ್ ಸ್ಫೋಟ : 13 ಜನ ಸಾವು – ಹಲವರು ಗಾಯ

ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಭಾರೀ ಕಾರ್ ಸ್ಫೋಟಕ್ಕೆ 13 ಮಂದಿ ಬಲಿಯಾಗಿದ್ದಾರೆ. ಭೀಕರ ಸ್ಫೋಟಕ್ಕೆ ದೇಹಗಳು ಛಿದ್ರ ಛಿದ್ರವಾಗಿದೆ.ಕಾರ್ ಬ್ಲಾಸ್ಟ್ ಆದ ಪರಿಣಾಮ ಸುತ್ತಮುತ್ತ ಇದ್ದ ಕಾರುಗಳು ಬೆಂಕಿಯಲ್ಲಿ ಹೊತ್ತಿ ಉರಿದಿದೆ.ಕೆಂಪು ಕೋಟೆ ಬಳಿ ಸಂಜೆ 6.55 ಕ್ಕೆ ಮೆಟ್ರೋ ಸ್ಟೇಷನ್ ಗೇಟ್-1ರ ಬಳಿ ಹರಿಯಾಣ ನೋಂದಣಿಯ ಹುಂಡೈ ಐ20 ಕಾರಿನ ಹಿಂಬಾಗದಲ್ಲಿ ಸ್ಫೋಟ ಸಂಭವಿಸಿದೆ. ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು,1೩ ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸದ್ಯ 7 ಅಗ್ನಿಶಾಮಕ ವಾಹನ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ. ಘಟನೆಯ ಸಮಯದಲ್ಲಿ ದೊಡ್ಡ ಜನಸಮೂಹವೇ ನೆರೆದಿತ್ತು. ಕೆಂಪು ಕೋಟೆ ಪ್ರದೇಶವು ಸಂಜೆಯ ಸಮಯದಲ್ಲಿ ಜನದಟ್ಟಣೆಯಿಂದ ಕೂಡಿರುತ್ತದೆ. ಜನರು ದೃಶ್ಯವೀಕ್ಷಣೆಗೆ ಭೇಟಿ ನೀಡುತ್ತಾರೆ
ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ನಂತರ 6 ಕಾರು, 3 ಆಟೋ ಸೇರಿ ಹಲವು ವಾಹನಗಳು ಬೆಂಕಿಯಿಂದ ಹೊತ್ತಿ ಉರಿಯುತ್ತಿವೆ. ಬೆಂಕಿ ನಂದಿಸಲು ದೆಹಲಿ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಘಟನೆ ನಂತರ ದೆಹಲಿಯಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಹಲವು ಪ್ರಮುಖ ರಸ್ತೆಗಳನ್ನು ಬಂದ್‌ ಮಾಡಲಾಗಿದೆ. ಘಟನಾ ಸ್ಥಳಕ್ಕೆ NSG ಮತ್ತು NIA ತಂಡಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಗೃಹಸಚಿವ ಅಮಿತ್ ಷಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ದುರ್ಘಟನೆ ಬಗ್ಗೆ ಮಾಹಿತಿ ಪಡೆದರು.ನಂತರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ,ದೆಹಲಿ ಪೋಲಿಸರಿಂದ ಮಾಹಿತಿ ಪಡೆದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ