Friday, April 19, 2024

ಪ್ರಾಯೋಗಿಕ ಆವೃತ್ತಿ

ಸರ್ಕಾರಿ ಶಾಲೆ ಮಕ್ಕಳಿಗೆ ಪುಸ್ತಕ ವಿತರಿಸಿದ ಪುರಸಭೆ ಸದಸ್ಯ

ಪಾಂಡವಪುರ ಪುರಸಭೆ ನಾಮ ನಿರ್ದೇಶಿತ ಸದಸ್ಯ, ಬಿಜೆಪಿ ಯುವ ಮುಖಂಡ ನರಸಿಂಹಚಾರಿ ಹಾಗೂ ಪವಿತ್ರ ನರಸಿಂಹಚಾರಿ ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಸರ್ಕಾರಿ ಶಾಲೆಯ ಮಕ್ಕಳಿಗೆ ಪುಸ್ತಕ, ಪೆನ್ ಗಳನ್ನು ಹಂಚಿ ಅರ್ಥಪೂರ್ಣವಾಗಿ ಆಚರಿಸಿದರು.

ಪಾಂಡವಪುರ ಪಟ್ಟಣದ ಬೀರಶೆಟ್ಟಹಳ್ಳಿ ಬಡಾವಣೆಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ ಗಳು ಹಾಗೂ ಬೀರಶೆಟ್ಟಹಳ್ಳಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸ್ಲೇಟ್ ಗಳನ್ನು ಉಚಿತವಾಗಿ ವಿವರಿಸಿದರು.

ಈ ಸಂದರ್ಭದಲ್ಲಿ ನರಸಿಂಹಚಾರಿ ಮಾತನಾಡಿ, ಬೀರಶೆಟ್ಟಹಳ್ಳಿ ಸರ್ಕಾರಿ ಶಾಲೆಯ ಮಕ್ಕಳಿಗೆ ಹಾಗೂ ಅಂಗನವಾಡಿ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ನೋಟ್ ಬುಕ್ ಗಳನ್ನು ವಿತರಿಸಲಾಗಿದೆ. ಜನಪ್ರತಿನಿಧಿಗಳ ಸಹಕಾರದೊಂದಿಗೆ ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಪಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಪಾಂಡವಪುರ ತಾಲೂಕು ಪ್ರಧಾನ ಕಾರ್ಯದರ್ಶಿ ಚಿಕ್ಕಮರಳಿ ಸಿ.ಎಂ.ನಾರಾಯಣಸ್ವಾಮಿ ಸಂತೋಷ್, ಕುಸುಮ, ಅಂಗನವಾಡಿ ಕಾರ್ಯಕರ್ತೆ ಭಾಗ್ಯಮ್ಮ, ಲಕ್ಷ್ಮಿ, ಸರ್ಕಾರಿ ಶಾಲೆಯ ಶಿಕ್ಷಕರಾದ ಮಮತಾಮಣಿ, ಹೆಚ್.ಮಹೇಶ್ ಹಾಗೂ ಬೀರಶೆಟ್ಟಹಳ್ಳಿ ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!