Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಫೆ.16ರಂದು ‘ಆಡಳಿತದ ಅಂಗಳದಲ್ಲಿ’ ಪುಸ್ತಕದ ಅವಲೋಕನ

ಮಂಗಲ ಟಿ.ತಿಮ್ಮೇಗೌಡ ಪ್ರತಿಷ್ಠಾನ ಮತ್ತು ಕನ್ನಿಕ ಶಿಲ್ಪ ನವೋದಯ ಏಜುಕೇಷನ್ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಟಿ.ತಿಮ್ಮೇಗೌಡ ಅವರ ‘ಆಡಳಿತದ ಅಂಗಳದಲ್ಲಿ’ ಪುಸ್ತಕದ ಅವಲೋಕನ, ಸಾಹಿತ್ಯ ಶ್ರೀ ಪ್ರಶಸ್ತಿ ಪ್ರದಾನ ಹಾಗೂ ಜಿಲ್ಲಾ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮವನ್ನು ಫೆಬ್ರವರಿ 16ರ ಬೆಳಿಗ್ಗೆ 10ಗಂಟೆಗೆ ಮಂಡ್ಯ ನಗರದ ಕೃಷಿಕ್ ಸರ್ವೋದಯ ಪೌಂಡೇಶನ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಎ.ಸಿ.ರಮೇಶ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷಿಕ್ ಸರ್ವೋದಯ ಟ್ರಸ್ಟ್‌ನ ಅಧ್ಯಕ್ಷ ಟಿ.ತಿಮ್ಮೇಗೌಡ ವಹಿಸಲಿದ್ದು, ಪ್ರಸಿದ್ಧ ಸಾಹಿತಿ ಡಾ. ಪ್ರದೀಪಕುಮಾರ ಹೆಬ್ರಿ ಕಾರ್ಯಕ್ರಮ ಉದ್ಘಾಟಿಸುವರು, ಜಿ.ಪಂ ಸಿಇಓ ಕೆ.ಆರ್.ನಂದಿನಿ ಅವರು ಸಾಹಿತ್ಯಶ್ರೀ ಪ್ರಶಸ್ತಿ ಪ್ರದಾನ ಮಾಡಲಿದ್ದು, ಸಾಹಿತಿ ಡಾ.ಶುಭಶ್ರೀಪ್ರಸಾದ್ ಪ್ರಶಸ್ತಿ ಸ್ವೀಕರಿಸುವರು ಎಂದರು.

ಇಂಜಿನಿಯರಿಂಗ್‌ನಲ್ಲಿ ಚಿನ್ನದ ಪದಕ ಪಡೆದ ಮೋಹನಪ್ರಿಯ ಕೆ.ಜಿ ಅವರಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಗುವುದು. ಸಾಹಿತಿ ಕೆ.ಪಿ.ಮೃತ್ಯುಂಜಯ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದು, ಪಿಇಟಿ ನಿರ್ದೇಶಕ ಡಾ.ರಾಮಲಿಂಗಯ್ಯ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು. ಪ್ರತಿಷ್ಠಾನದ ಅಧ್ಯಕ್ಷ ಎ.ಸಿ.ರಮೇಶ್ ಹಾಗೂ ಟ್ರಸ್ಟ್‌ನ ಅಧ್ಯಕ್ಷ ಹೆಚ್.ಬಿ.ರಾಮಕೃಷ್ಣ ಉಪಸ್ಥಿತರಿರುವರು ಎಂದರು.

ಗೋಷ್ಠಿಯಲ್ಲಿ ಟ್ರಸ್ಟ್‌ನ ಜಂಟಿ ಕಾರ್ಯದರ್ಶಿ ಹೆಚ್.ಆರ್.ಕನ್ನಿಕಾ, ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಕೀಲಾರ ಕೃಷ್ಣೇಗೌಡ, ಖಜಾಂಚಿ ಟಿ.ಶಂಕರೇಗೌಡ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ