Thursday, October 10, 2024

ಪ್ರಾಯೋಗಿಕ ಆವೃತ್ತಿ

ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಬಲವರ್ಧನೆ ಮಾಡಿ:ಗುರು ಚರಣ್

ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡುವ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ರಚನೆಯಾಗಿದ್ದು,ಮದ್ದೂರು ತಾಲ್ಲೂಕಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಿ.ಹೆಚ್‌. ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷ ಚಾಮಲಾಪುರ ದೊಡ್ಡಿ ಪ್ರಮೋದ್ ಅವರನ್ನು ಕೆಪಿಸಿಸಿ ಸದಸ್ಯ ಎಸ್ ಗುರುಚರಣ್ ಅಭಿನಂದಿಸಿದರು.

ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಗುರುಚರಣ್ ಅವರ ಮನೆಯಲ್ಲಿ ತಾಲ್ಲೂಕು ಯುವ ಕಾಂಗ್ರೆಸ್ ನ ನೂತನ ಅಧ್ಯಕ್ಷರು ಉಪಾಧ್ಯಕ್ಷರನ್ನು ಅಭಿನಂದಿಸಿ ನಂತರ ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ಯುವ ಘಟಕದ ಅಧ್ಯಕ್ಷರ ನೇಮಕ ಮಾಡಿದ್ದು, ಅವರು ಪ್ರತಿ ಗ್ರಾಮಗಳಲ್ಲಿ ಯುವಕರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರಬೇಕು. ಬೂತ್ ಕಮಿಟಿ ರಚನೆ ಮಾಡಬೇಕು. ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಕಾರ್ಯನಿರತರಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಉಪಾಧ್ಯಕ್ಷೆ ಮಮತಾ ಶಂಕರೇಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ,ಟಿಎಪಿಎಂಎಸ್ ಉಪಾಧ್ಯಕ್ಷ ರಾಘು, ಮನು, ಚೇತನ್, ರವಿ ಇತರರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!